ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ರಾಜಕಾರಣ ಮಾಡುತ್ತಿರುವುದು ಹೊಸದೇನಲ್ಲ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ರಾಜಕಾರಣ ಮಾಡುತ್ತಿರುವುದು ಹೊಸದೇನಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ರಾಜಕಾರಣ ಮಾಡುತ್ತಿರುವುದು ಹೊಸದೇನಲ್ಲ. ಹಿಂದೂಗಳಿಲ್ಲದೇ ನಾವು ರಾಜಕೀಯ ಮಾಡುತ್ತೇವೆ ಎಂದರೆ ಅದು ಅವರ ಕರ್ಮ. ಆದರೆ ಈ ದೇಶ ಮೊದಲಿನಿಂದಲೂ ಹಿಂದೂ ರಾಷ್ಟ್ರವಾಗಿದೆ ಎಂಬ ಸತ್ಯವನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.
ಈ ದೇಶದಲ್ಲಿ ತಮ್ಮ ಧಾರ್ಮಿಕ ನಂಬಿಕೆಗಳನ್ನು ಆಚರಣೆ ಮಾಡಲು ಎಲ್ಲರಿಗೂ ಅವಕಾಶವಿದೆ. ನಾನು ಅನೇಕ ಕಮ್ಯೂನಿಸ್ಟ್ ನಾಯಕರು ದೇವಸ್ಥಾನಗಳಿಗೆ ಭೇಟಿ ನೀಡುವುದನ್ನು ನೋಡಿದ್ದೇನೆ. ನಾಸ್ತಿಕತೆಯಲ್ಲಿ ಹೆಚ್ಚು ನಂಬಿಕೆ ಇಡುವ ಕಮ್ಯೂನಿಸ್ಟ್ ನಾಯಕರೂ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ ಎಂದರೆ, ಈ ದೇಶದ ಆಧ್ಯಾತ್ಮಿಕ ಪರಂಪರೆ ಅದೆಷ್ಟು ಗಟ್ಟಿಯಾಗಿದೆ ಎಂಬುದನ್ನು ಯಾರಾದರೂ ಊಹಿಸಬಲ್ಲರು ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?