ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮತ್ತೆ ಇಡಿ ಕಸ್ಟಡಿಗೆ..! ಕೋರ್ಟ್ ಹೇಳಿದ್ದೇನು..?
ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಆರೋಪದ ಹಿನ್ನೆಲೆಯಲ್ಲಿ 6 ದಿನ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಕಸ್ಟಡಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಅಲ್ಲದೇ ಅವರಗೆ 24 ಗಂಟೆಗಳಿಗೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಬೇಕು ಎಂದು ಕೋರ್ಟ್ ಸೂಚಿಸಿದೆ. ಇದರೊಂದಿಗೆ ಶುದ್ಧವಾದ ಆಹಾರ, ನೀರು, ಮೆಡಿಸಿನ್ ನೀಡಬೇಕು. ಆರೋಪಿಗೆ ಸ್ವಲ್ಪ ವಿಶ್ರಾಂತಿ ಕೊಟ್ಟು ವಿಚಾರಣೆ ಮಾಡಬೇಕು. 30 ನಿಮಿಷ ವಕೀಲರ ಭೇಟಿಗೆ ಅವಕಾಶ ನೀಡಬೇಕು, ರಾತ್ರಿ 9 ಗಂಟೆಯ ತನಕ ವಿಚಾರಣೆ ನಡೆಸಬೇಕು ಎಂದು ಕೋರ್ಟ್ ಹೇಳಿದೆ.
ವಿರೇಂದ್ರ ಪಪ್ಪಿ ಇಡಿ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಡಿ ಪರ ವಕೀಲ ಪ್ರಮೋದ್ ಚಂದ್ರ ವಾದ ಮಂಡಿಸಿದ್ರೆ, ಆರೋಪಿ ವಿರೇಂದ್ರ ಪಪ್ಪಿ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?