ಕಾಂಗ್ರೆಸ್ ಶಾಸಕನ ಮೇಲೆ ರೇಪ್ ಕೇಸ್: ಇದು ಬ್ಲ್ಯಾಕ್ ಮೇಲ್ ಎಂದ ವಿನಯ್ ಕುಲಕರ್ಣಿ!

ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಿರುದ್ಧ ಬೆಂಗಳೂರಿನಲ್ಲಿ ರೇಪ್ ಕೇಸ್ ದಾಖಲಾಗಿದೆ.ತಮ್ಮ ಮೇಲೆ ಶಾಸಕ ಕುಲಕರ್ಣಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊರ್ವಳು ಬೆಂಗಳೂರು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿದೆ.
ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ವಿನಯ್ ಕುಲಕರ್ಣಿ ಅವರನ್ನು ಒಂದನೇ ಆರೋಪಿ ಮತ್ತು ಅವರ ಆಪ್ತ ಸಹಾಯಕ ಅರ್ಜುನ್ ಅನ್ನು ಎರಡನೇ ಆರೋಪಿ ಎಂದು ಹೆಸರಿಸಿ ಎಫ್‌ಐಆರ್ ದಾಖಲಿಸಿದ್ದಾರೆ
ಇನ್ನೂ ಮತ್ತೊಂದೆಡೆ ನನ್ನ ವಿರುದ್ಧ ಮಹಿಳೆಯೊಬ್ಬರು ಕಿರುಕುಳ ಆರೋಪ ಹೊರಿಸಿದ್ದಾರೆ ಮತ್ತು ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥರೊಬ್ಬರು 2 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆʼ, ಎಂದು ಮಾಜಿ ಸಚಿವ, ಹಾಲಿ ಶಾಸಕ ವಿನಯ್ ಕುಲಕರ್ಣಿ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಈ ಬೆಳವಣಿಗೆಗಳ ಮಧ್ಯೆ ಆ ಮಹಿಳೆಯು ಮಂಗಳವಾರ ಪ್ರತಿ ದೂರು ನೀಡಿದ್ದು, ಎಫ್‍ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ‘2022ರಲ್ಲಿ ಹಾವೇರಿ ಜಿಲ್ಲೆಯ ರೈತ ಹೋರಾಟಗಾರ್ತಿಯೊಬ್ಬರು ಎಂದು ಹೇಳಿಕೊಂಡು ಕರೆ ಮಾಡಿ ಮಾತನಾಡಿದ್ದರು. ಇದೀಗ ಅವರು ತನಗೆ ವಂಚನೆ ಮಾಡಲಾಗಿದೆ. ನೀವು ಮಾತನಾಡಿರುವ ವಿಡಿಯೊ ಕಾಲ್, ಮೊಬೈಲ್ ಸಂಭಾಷಣೆ ಪ್ರಸಾರ ಮಾಡಲಾಗುವುದು ಎಂದು ಷಂಡ್ಯಂತ್ರ ರೂಪಿಸಿದ್ದರು’ ಎಂದು ವಿನಯ್ ಕುಲಕರ್ಣಿ ದೂರಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






