ಕಾಂಗ್ರೆಸ್ ಸರ್ಕಾರ ನಮ್ಮನ್ನು ಕೇವಲವಾಗಿ ನಡೆಸಿಕೊಂಡಿದೆ: ಜಯಮೃತ್ಯುಂಜಯ ಶ್ರೀ ಬೇಸರ!

ಡಿಸೆಂಬರ್ 24, 2024 - 16:01
 0  9
ಕಾಂಗ್ರೆಸ್ ಸರ್ಕಾರ ನಮ್ಮನ್ನು ಕೇವಲವಾಗಿ ನಡೆಸಿಕೊಂಡಿದೆ: ಜಯಮೃತ್ಯುಂಜಯ ಶ್ರೀ ಬೇಸರ!

ಬಳ್ಳಾರಿ:- ಜ.16ರಿಂದ ಹಳ್ಳಿ ಹಳ್ಳಿಯಲ್ಲಿ ಪಂಚಮಸಾಲಿ ಜಾಗೃತಿ ಸಭೆ ನಡೆಯಲಿದ್ದು, ನಮ್ಮ ಸಮುದಾಯಕ್ಕೆ ಮೀಸಲಾತಿ ಪಡೆದೇ ಪಡೆಯುತ್ತೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಸವಾಲ್ ಹಾಕಿದ್ದಾರೆ. 

ಈ ಸಂಬಂಧ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮನ್ನು ಕೇವಲವಾಗಿ ನಡೆಸಿಕೊಂಡಿದ್ದು, ಬಹಳ ಅಪಮಾನ ಮಾಡಿದೆ. ಮುಂದಿನ ದಿನಗಳಲ್ಲಿ ಹಳ್ಳಿ ಹಳ್ಳಿಯಲ್ಲಿ ಜಾಗೃತಿ ಮೂಡಿಸಿ ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದೂ ಹೇಳಿದ್ದಾರೆ.

ಜನವರಿ 16ರಿಂದ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಪಂಚಮಸಾಲಿ ಜಾಗೃತಿ ಸಭೆ ನಡೆಸಲಾಗುವುದು. ಮುಂದಿನ 3 ವರ್ಷ ಹೋರಾಟದ ಮೂಲಕ ಜಾಗೃತಿ ಮೂಡಿಸುತ್ತೇವೆ ಎಂದು ಅವರು ಹೇಳಿದರು.

2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ಮಾಡಿದರೆ ನಮ್ಮ ಮೇಲೆ ಲಾಠಿಚಾರ್ಜ್​​ ಮಾಡಿಸಿದರು. ಸಿಎಂ ಸಿದ್ದರಾಮಯ್ಯ ಸರ್ಕಾರ ನಮ್ಮ ಮೇಲೆ ಲಾಠಿಚಾರ್ಜ್​​ ಮಾಡಿದೆ. ಕಾಂಗ್ರೆಸ್ ಪಕ್ಷ ಪಂಚಮಸಾಲಿ ಸಮಾಜಕ್ಕೆ ಬಹಳ ಅಪಮಾನ ಮಾಡಿದೆ. ಲಾಠಿಚಾರ್ಜ್ ಮಾಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ಸರ್ಕಾರ ಈವರೆಗೆ ಪಂಚಮಸಾಲಿಗಳ ಕ್ಷಮೆ ಕೇಳಿಲ್ಲ. ಮೀಸಲಾತಿ ಕೊಡಲು ಆಗಲ್ಲ ಎಂದು ಸಿಎಂ ನೇರವಾಗಿ ಹೇಳಿದ್ದಾರೆ. ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಅವರು ಹೇಳಿದ್ದಾರೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow