ಕಾಂಗ್ರೆಸ್ʼ​ನಲ್ಲಿ ಕಿಚ್ಚು ಹಚ್ಚಿದ ಯತೀಂದ್ರ ಹೇಳಿಕೆ: ನಾವು 2028ಕ್ಕೆ CM ಕ್ಲೈಮ್ ಮಾಡುತ್ತೇವೆ ಎಂದ ಸತೀಶ್ ಜಾರಕಿಹೊಳಿ!

ಅಕ್ಟೋಬರ್ 23, 2025 - 12:01
 0  74
ಕಾಂಗ್ರೆಸ್ʼ​ನಲ್ಲಿ ಕಿಚ್ಚು ಹಚ್ಚಿದ ಯತೀಂದ್ರ ಹೇಳಿಕೆ: ನಾವು 2028ಕ್ಕೆ CM ಕ್ಲೈಮ್ ಮಾಡುತ್ತೇವೆ ಎಂದ ಸತೀಶ್ ಜಾರಕಿಹೊಳಿ!

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ನೀಡಿದ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ತಮ್ಮ ತಂದೆಯ ರಾಜಕೀಯ ಜೀವನದ ಬಗ್ಗೆ ಮಾತನಾಡಿದರು.

ರಾಜ್ಯಕ್ಕೆ ಈಗ ಪ್ರಗತಿಪರ ಮತ್ತು ಸೈದ್ಧಾಂತಿಕ ಮನಸ್ಸಿನ ನಾಯಕರು ಬೇಕಾಗಿದ್ದಾರೆ. ಅಂತಹ ಬದ್ಧತೆ ಸತೀಶ್ ಜಾರಕಿಹೊಳಿ ಅವರಲ್ಲಿದೆ ಎನ್ನುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವ ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿಯಾಗುವ ಬಗ್ಗೆಯೂ ಅವರು ಸುಳಿವು ನೀಡಿದ್ದಾರೆ.

ಇನ್ನೂ ಈ ವಿಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ  ಪ್ರತಿಕ್ರಯೇ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾವು 2028ಕ್ಕೆ ಸಿಎಂ ಕ್ಲೈಮ್ ಮಾಡುತ್ತೇವೆ ಅಂತಾ ಈ ಮುಂಚೆಯೇ ಹೇಳಿದ್ದೇವೆ. ಅದನ್ನು ಪಕ್ಷ ತೀರ್ಮಾನ ಮಾಡಬೇಕು. ಇನ್ನು ಯತೀಂದ್ರ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅಂತಿಮವಾಗಿ ಯಾರು ನಾಯಕತ್ವ ವಹಿಸಿಕೊಳ್ಳಬೇಕು ಅಂತಾ ಪಕ್ಷ, ಶಾಸಕರು ನಿರ್ಧಾರ ಮಾಡಬೇಕು. ಎಲ್ಲರನ್ನೂ ಜೊತೆಗೆ ಒಯ್ಯುವ ಪ್ರಯತ್ನ ಮಾಡುತ್ತಿದ್ದೇವೆ ಅಂತಿಮವಾಗಿ ಪಕ್ಷವೆ ನಿರ್ಧಾರ ಮಾಡಬೇಕು ಎಂದರು.

ಅಹಿಂದ ನಾಯಕತ್ವ ಇದ್ದೇ ಇದೆ. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ಹಿಂದೆಯೂ ಇದೆ. ಇವತ್ತೂ ಇದೆ. ನಾಳೆಯೂ ಕೂಡ ಇದ್ದೇ ಇರುತ್ತದೆ. ಅಹಿಂದ ನಾಯಕತ್ವ ಇಲ್ಲದೇ ರಾಜಕಾರಣ ಮಾಡಲು ಆಗುವುದಿಲ್ಲ‌‌‌. ಎಲ್ಲವನ್ನೂ ಇವತ್ತೆ ಜೋಡಿಸಲು ಆಗಲ್ಲ. ಅದಕ್ಕಾಗಿ ಕಾಯಬೇಕಾಗುತ್ತದೆ ಎಂದು ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಅವರು ಇದರಲ್ಲಿ ಪ್ರಮುಖ ಮಾತ್ರ ವಹಿಸಬೇಕಾಗುತ್ತದೆ ಎಂಬುದಕ್ಕೆ ಎಲ್ಲವನ್ನೂ ಇಂದು ಕಾಕತಿಯಲ್ಲಿ ತೀರ್ಮಾನಿಸಲು ಆಗಲ್ಲ‌‌. ಇನ್ನೂ 30 ತಿಂಗಳು ಇದೆ. ನಂತರ ಏನೇನು ಬೆಳವಣಿಗೆ ಆಗುತ್ತದೆ‌?. ಪಕ್ಷ, ಶಾಸಕರು, ಆಗಿನ ವಾತಾವರಣದ ಮೇಲೆ ನಿರ್ಧಾರ ಆಗುತ್ತದೆ ಎಂದು ಸತೀಶ ಜಾರಕಿಹೊಳಿ ಹೇಳಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow