ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕ ಸಾವು! ಮತ್ತೊಬ್ಬನಿಗೆ ಗಂಭೀರ ಗಾಯ

ಅಕ್ಟೋಬರ್ 4, 2024 - 14:08
 0  10
ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕ ಸಾವು! ಮತ್ತೊಬ್ಬನಿಗೆ ಗಂಭೀರ ಗಾಯ

 

ಬೆಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಾಂದ್ರ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮತ್ತೋರ್ವ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾರೆ. ರಾಯಚೂರಿನ ದೇವದುರ್ಗ ಮೂಲದ ಪರಶುರಾಮ್ (24) ಮೃತ ದುರ್ದೈವಿ.

ಪೈಪ್ ಲೈನ್ ಹಾಕಲು ಮಣ್ಣು ತೆಗೆಯುತ್ತಿದ್ದ ವೇಳೆ ಕಾಂಪೌಂಡ್ ಗೋಡೆ ಕುಸಿದಿದೆ. ಕಾಂಪೌಂಡ್ ಗೋಡೆ ಪಕ್ಕದಲ್ಲಿಯೇ ಗುಂಡಿ ತೆಗೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಾಯಚೂರು ಮೂಲದ ಐದಾರು ಮಂದಿ ಮಣ್ಣು ಕೆಲಸ ಮಾಡುತ್ತಿದ್ದರು.

 ಈ ವೇಳೆ ಏಕಾಏಕಿ ಕಾರ್ಮಿಕ ಮೇಲೆಯೇ ಗೋಡೆ ಕುಸಿದಿದೆ. ಹೊಟ್ಟೆಪಾಡಿಗೆ ದೂರದ ರಾಯಚೂರಿನಿಂದ ಬಂದಿದ್ದ ಪರಶುರಾಮ್‌ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾನೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

 ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow