ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ

ಮೇ 12, 2025 - 08:20
 0  24
ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ

ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ಹೃದಯಘಾತರಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. 

ರಾಕೇಶ್ ಪೂಜಾರಿ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್ ಪೇಟೆ ಅವರು ಖಚಿತಪಡಿಸಿದ್ದಾರೆ. ಸಾವಿಗೆ ಅವರ ಆಪ್ತ ಬಳಗ ಶಾಕ್ ಆಗಿದೆ. ಅವರ ಸಾವಿಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow