ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

ಬಂಗಾರಪೇಟೆ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಂಗಾರಪೇಟೆ ತಾಲ್ಲೂಕು ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಹೈವೆಯಲ್ಲಿ ನಡೆದಿದೆ. ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45) , ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಮೃತ ದುರ್ದೈವಿಗಳು. ಸುಶ್ಮಿತಾ, ವಿರುತ, ಸುಜಾತ, ಸುನಿಲ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿಮ್ಮ ಪ್ರತಿಕ್ರಿಯೆ ಏನು?






