ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ನಟ ವಿಜಯ್
ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ದಳಪತಿ ಆಯೋಜಿಸಿದ್ದ ಚುನಾವಣಾ ಪ್ರಚಾರ ರ‍್ಯಾಲಿ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 39 ಮಂದಿ ಸಾವನ್ನಪ್ಪಿದ್ದು, 48 ಮಂದಿ ಗಾಯಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಜಯ್ ದಳಪತಿ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದುಃಖ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.
ವಿಜಯ್ ದಳಪತಿ ಎಕ್ಸ್‌ನಲ್ಲಿ ಹಂಚಿಕೊಂಡ ಸಂದೇಶ:
"ಶನಿವಾರ ಕರೂರಿನಲ್ಲಿ ನಡೆದ ದುರಂತದಿಂದ ನನ್ನ ಹೃದಯ ಮತ್ತು ಮನಸ್ಸು ಭಾರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ದುಃಖಿಸುತ್ತಿರುವ ಕುಟುಂಬಗಳಿಗೆ ನನ್ನ ಸಂತಾಪವನ್ನು ಸಲ್ಲಿಸುತ್ತೇನೆ. ನಾನು ನಿಮ್ಮ ಕುಟುಂಬದ ಸದಸ್ಯನಾಗಿ, ಮೃತರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ನೀಡುತ್ತೇನೆ.
ಈ ಮೊತ್ತವು ದುಃಖವನ್ನು ತೀರಿಸಲು ಸಾಧ್ಯವಿಲ್ಲ, ಆದರೂ ನಿಮ್ಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅಗತ್ಯವಿರುವ ಎಲ್ಲಾ ಬೆಂಬಲವನ್ನು ನಮ್ಮ ತಮಿಳಗ ವೆಟ್ರಿ ಕಳಗಂ ಪಕ್ಷ ನೀಡುತ್ತದೆ." ಎಂದು ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?