ಕಾಲ್ತುಳಿತದಲ್ಲಿ 11 ಜನರ ಸಾವು: ಸ್ವಯಂ ಪ್ರೇರಿತ PIL ದಾಖಲಿಸಿದ ಹೈಕೋರ್ಟ್ - ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ

ಜೂನ್ 5, 2025 - 12:00
 0  11
ಕಾಲ್ತುಳಿತದಲ್ಲಿ 11 ಜನರ ಸಾವು: ಸ್ವಯಂ ಪ್ರೇರಿತ PIL ದಾಖಲಿಸಿದ ಹೈಕೋರ್ಟ್ - ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸೇರಿದ್ದರಿಂದ ಗೇಟ್-6 ರಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಮಾಹಿತಿ ಲಭ್ಯವಾಗಿದೆ. ಆರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.

ಘಟನೆ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿಕೊಂಡಿದ್ದು, ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಯಲಿದ್ದು, ಅಡ್ವೊಕೇಟ್ ಜನರಲ್ ಮೂಲಕ ಸರ್ಕಾರ ನ್ಯಾಯಾಲಯಕ್ಕೆ ಸಂಪೂರ್ಣ ವಿವರ ನೀಡಬೇಕಿದೆ.

ನಿನ್ನೆ ವಿಧಾನ ಸೌಧ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯುವಾಗ ಹೈಕೋರ್ಟ್ ಕಟ್ಟಡದ ಮೇಲೆಯೂ ಜನರು ಏರಿ ವೀಕ್ಷಿಸುತ್ತಿದ್ದರು. ಸಂದರ್ಭದ ಫೋಟೋ -ವಿಡಿಯೊಗಳು ಸಾಕಷ್ಟು ಹರಿದಾಡಿದ್ದು ಭದ್ರತಾ ಲೋಪವಾಗಿದ್ದು ಸರ್ಕಾರದಿಂದ ಹೈಕೋರ್ಟ್ ವಿವರ ಕೇಳಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow