ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೀಡಿದ್ದ ಪರಿಹಾರ 25 ಲಕ್ಷ ರೂಪಾಯಿ ಹೆಚ್ಚಳ..!

ಜೂನ್ 8, 2025 - 09:05
 0  13
ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೀಡಿದ್ದ ಪರಿಹಾರ 25 ಲಕ್ಷ ರೂಪಾಯಿ ಹೆಚ್ಚಳ..!

ಆರ್ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. 65 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಸಿಎಂ ಸಿದ್ದರಾಮಯ್ಯ ಅವರು, ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಘೋಷಿಸಿದ್ದಾರೆ. 10 ಲಕ್ಷ ಪರಿಹಾರ ಘೋಷಣೆಗೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೆ ನಿರ್ಧಾರ ಕೈಗೊಂಡಿದ್ದಾರೆ.

ಮೊದಲು ಸರ್ಕಾರ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು. 10 ಲಕ್ಷ ರೂಪಾಯಿ ಸಾಕಾಗಲ್ಲ. ಸರ್ಕಾರ, ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂಬ ಆಗ್ರಹಗಳು ಕೇಳಿಬಂದಿದ್ದವು. ಜೂನ್ 4 ರಂದು ಆರ್ಸಿಬಿ ಚಿನ್ನಸ್ವಾಮಿ ಮೈದಾನದಲ್ಲಿ ವಿಕ್ಟರಿ ಪರೇಡ್ ಇಟ್ಟುಕೊಂಡಿತ್ತು. ಇದನ್ನು ವೀಕ್ಷಿಸಲು ಲಕ್ಷಾಂತರ ಆರ್ಸಿಬಿ ಅಭಿಮಾನಿಗಳು ಬಂದಿದ್ದರು. ಆಗ ನೂಕು, ನುಗ್ಗಲು ಸಂಭವಿಸಿ ಭೀಕರ ಕಾಲ್ತುಳಿತ ಸಂಭವಿಸಿತ್ತು.

ದುರಂತದಲ್ಲಿ ಒಟ್ಟು 11 ಆರ್ಸಿಬಿ ಅಭಿಮಾನಿಗಳು ಜೀವ ಕಳೆದುಕೊಂಡಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಗಾಯಗೊಂಡವರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡುವ ಭರವಸೆ ನೀಡಿದೆ. ಇನ್ನು ಪ್ರಕರಣದ ತನಿಖೆಯನ್ನು ನಿವೃತ್ತ ಜಸ್ಟೀಸ್ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ ಮಾಡಿದೆ. ಇನ್ನು ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ಗಳ ವಿಚಾರಣೆಯನ್ನು ಸಿಐಡಿಗೆ ನೀಡಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow