ಕಿಂಗ್ ಕೊಹ್ಲಿ ಫ್ಯಾನ್ಸ್ ಗೆ ನಿರಾಸೆ: RCB ತಂಡಕ್ಕೆ ಹೊಸ ನಾಯಕ ಆಯ್ಕೆ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಹಾಗೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಫ್ಯಾನ್ಸ್ ಗೆ ಕೊಂಚ ಬೇಸರ ಆಗಿದೆ.
ಪ್ರಸಕ್ತ ಸಾಲಿನ IPL ನಲ್ಲಿ ಸಾಕಷ್ಟು ಆಟಗಾರರಿಗೆ ಕೊಕ್ ಕೊಟ್ಟು ಹೊಸ ಬಲಿಷ್ಟ ತಂಡ ಕಟ್ಟಿರುವ RCB ಫ್ಯಾನ್ಸ್ ಗೆ ನಿರಾಸೆ ಮೂಡಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ಪಾಟಿದಾರ್ಗೆ ವಹಿಸಲಾಗಿದೆ.
ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2021 ರಿಂದ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ 31 ವರ್ಷದ ಪಾಟಿದಾರ್ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.
ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ಫಾಫ್ ಡುಪ್ಲೆಸಿಸ್ ಕಾಣಿಸಿಕೊಂಡಿದ್ದರು. 2022 ರಿಂದ 2024 ರವರೆಗೆ ಡುಪ್ಲೆಸಿಸ್ ಮುಂದಾಳತ್ವದಲ್ಲಿ ಆರ್ಸಿಬಿ ಕಣಕ್ಕಿಳಿದಿತ್ತು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು.
ಮೆಗಾ ಹರಾಜಿನಲ್ಲಿ ಫಾಫ್ ಡುಪ್ಲೆಸಿಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತವಾಗಿತ್ತು. ಹೀಗಾಗಿ ವಿರಾಟ್ ಕೊಹ್ಲಿ ನಾಯಕರಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಕೊಹ್ಲಿ ಬದಲಿಗೆ ರಜತ್ ಪಾಟಿದಾರ್ ಅವರನ್ನು ನಾಯಕರಾಗಿ ನೇಮಕ ಮಾಡಲಾಗಿದೆ
ನಿಮ್ಮ ಪ್ರತಿಕ್ರಿಯೆ ಏನು?






