ಕಿಂಗ್ ಕೊಹ್ಲಿ ಹಿಂದಿಕ್ಕಿ ವಿಶೇಷ ದಾಖಲೆ ಬರೆದ RCB ಮಾಜಿ ಕ್ಯಾಪ್ಟನ್!

ಜನವರಿ 28, 2025 - 09:19
 0  11
ಕಿಂಗ್ ಕೊಹ್ಲಿ ಹಿಂದಿಕ್ಕಿ ವಿಶೇಷ ದಾಖಲೆ ಬರೆದ RCB ಮಾಜಿ ಕ್ಯಾಪ್ಟನ್!

ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಅವರ ವಿಶೇಷ ದಾಖಲೆಯನ್ನು RCB ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಸರಿಗಟ್ಟಿದ್ದಾರೆ. 

ಸನ್​ರೈಸರ್ಸ್ ಈಸ್ಟರ್ನ್ ಕೇಪ್​ ವಿರುದ್ಧದ ಪಂದ್ಯದಲ್ಲಿ ಜೋಬರ್ಗ್ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುವುದರೊಂದಿಗೆ ಫಾಫ್ ಟಿ20 ಕ್ರಿಕೆಟ್​ನಲ್ಲಿ 400 ಮ್ಯಾಚ್​ಗಳನ್ನಾಡಿದ ಸಾಧಕರ ಪಟ್ಟಿಗೆ ಸೇರ್ಪಡೆಯಾದರು.

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 399 ಪಂದ್ಯಗಳನ್ನಾಡಿದ್ದರೆ, ಫಾಫ್ ಡುಪ್ಲೆಸಿಸ್ ಇದೀಗ 400 ಪಂದ್ಯಗಳ ಗುರಿ ಮುಟ್ಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಫಾಫ್​ಗೂ ಮುನ್ನ ಡೇವಿಡ್ ಮಿಲ್ಲರ್ (516) ಹಾಗೂ ಇಮ್ರಾನ್ ತಾಹಿರ್ (426) ಮಾತ್ರ ಸೌತ್ ಆಫ್ರಿಕಾ ಪರ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಫಾಫ್ ಡುಪ್ಲೆಸಿಸ್ ಎಂಟ್ರಿ ಕೊಟ್ಟಿದ್ದಾರೆ.

ಹಾಗೆಯೇ ಟಿ20 ಕ್ರಿಕೆಟ್ ಇತಿಹಾಸದಲ್ಲಿ 400 ಪಂದ್ಯಗಳನ್ನಾಡಿದ ವಿಶ್ವದ 22ನೇ ಆಟಗಾರನೆಂಬ ಕೀರ್ತಿಗೂ ಫಾಫ್ ಡುಪ್ಲೆಸಿಸ್ ಪಾತ್ರರಾಗಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow