ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಪುಡಿಪುಡಿ ಮಾಡಿದ ಅಫ್ಘಾನ್ ಆಟಗಾರ!

ಸೆಪ್ಟೆಂಬರ್ 24, 2024 - 09:02
 0  15
ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಪುಡಿಪುಡಿ ಮಾಡಿದ ಅಫ್ಘಾನ್ ಆಟಗಾರ!

ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನು ಅಫ್ಘಾನಿಸ್ಥಾನ್ ಆಟಗಾರ ಗುರ್ಬಾಝ್ ಸರಿಗಟ್ಟಿದ್ದಾರೆ.  ಶಾರ್ಜಾದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಅಫ್ಘಾನಿಸ್ತಾನ್ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ವಿಶೇಷ ದಾಖಲೆ ಬರೆದಿದ್ದಾರೆ.

ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಗುರ್ಬಾಝ್ 110 ಎಸೆತಗಳಲ್ಲಿ 3 ಸಿಕ್ಸ್, 10 ಫೋರ್ ಗಳೊಂದಿಗೆ 105 ರನ್ ಚಚ್ಚಿದ್ದರು. ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದರು.

ಇದಕ್ಕೂ ಮುನ್ನ 2ನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಮಾತ್ರ ಕಾಣಿಸಿಕೊಂಡಿದ್ದರು. 23 ವರ್ಷದೊಳಗೆ 66 ಏಕದಿನ ಇನಿಂಗ್ಸ್ ಆಡಿದ್ದ ಕೊಹ್ಲಿ ಒಟ್ಟು 7 ಸೆಂಚುರಿ ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದೀಗ 23ನೇ ವಯಸ್ಸಿನಲ್ಲಿ 7ನೇ ಶತಕ ಪೂರೈಸುವ ಮೂಲಕ ರಹಮಾನುಲ್ಲಾ ಗುರ್ಬಾಝ್ ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ್ದಾರೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow