ಕಿಲ್ಲರ್ 'BMTC ಬಸ್' ಗೆ ಮತ್ತೊಂದು ಬಲಿ! ಬಸ್ ಹರಿದು 10 ವರ್ಷದ ಪುಟ್ಟ ಕಂದಮ್ಮ ಸಾವು!
ಬೆಂಗಳೂರು: ಬಿಎಂಟಿಸಿ ಬಸ್ಗೆ ಮತ್ತೊಂದು ಜೀವ ಬಲಿಯಾದ ಘಟನೆ ಯಲಹಂಕ ಕೋಗಿಲು ಕ್ರಾಸ್ ಬಳಿ ನಡೆದಿದೆ. 10 ವರ್ಷದ ಬಾಲಕಿ ತನ್ವಿ ಈ ದುರಂತದಲ್ಲಿ ಮೃತಪಟ್ಟಿದ್ದಾಳೆ. ಮಿಲಿಯನಿಯಂ ಸ್ಕೂಲ್ನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತನ್ವಿ, ತಾಯಿ ಹರ್ಷಿತಾ ಅವರೊಂದಿಗೆ ಸ್ಕೂಟರ್ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಹರ್ಷಿತಾ ಅವರು ಹೋಂಡಾ ಆಕ್ಟಿವಾದಲ್ಲಿ ಮಗಳನ್ನು ಬಿಡಲು ಹೊರಟಿದ್ದ ವೇಳೆ, ಯಲಹಂಕದ ಕೋಗಿಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಹತ್ತಿರ ಸ್ಕೂಟರ್ ಸ್ಕಿಡ್ ಆಗಿದೆ.
ಈ ವೇಳೆ ಹಿಂಬದಿ ಕುಳಿತಿದ್ದ ಬಾಲಕಿ ತನ್ವಿ ಕೆಳಗೆ ಬಿದ್ದು, ಹಿಂದಿನಿಂದ ಬಂದ ಬಿಎಂಟಿಸಿ ಬಸ್ನ ಚಕ್ರದಡಿ ಸಿಲುಕಿದ್ದಾಳೆ. ಬಸ್ ಚಕ್ರ ತಲೆಯ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯ ನಂತರ ಯಲಹಂಕ ಪೊಲೀಸರು ಬಿಎಂಟಿಸಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?