ಕುಂಭಮೇಳದಲ್ಲಿ ಮತ್ತೊಂದು ಅಗ್ನಿ ದುರಂತ: ಜಸ್ಟ್ ಮಿಸ್ ನಲ್ಲಿ ಭಕ್ತರು ಪಾರು!

ಫೆಬ್ರವರಿ 7, 2025 - 14:52
 0  9
ಕುಂಭಮೇಳದಲ್ಲಿ ಮತ್ತೊಂದು ಅಗ್ನಿ ದುರಂತ: ಜಸ್ಟ್ ಮಿಸ್ ನಲ್ಲಿ ಭಕ್ತರು ಪಾರು!

ಪ್ರಯಾಗ್ ರಾಜ್:- ಕುಂಭಮೇಳದಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಕ್ತರು ಪಾರಾಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜರುಗಿದೆ. 

ನಗರದ ಸೆಕ್ಟರ್‌ 18ರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಸೆಕ್ಟರ್‌ 18ರ‌ ತುಳಸಿ ಚೌರಾಹಾ ಬಳಿಕ ಕ್ಯಾಂಪ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಖಾಕ್ ಚೌಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಯೋಗೇಶ್ ಚತುರ್ವೇದಿ ತಿಳಿಸಿದ್ದಾರೆ. 

ಕುಂಭಮೇಳದಲ್ಲಿ 3ನೇ ಬಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಕಳೆದ ಜನವರಿ 30 ರಂದು ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಕನಿಷ್ಠ 15 ಟೆಂಟ್‌ಗಳು ಭಸ್ಮವಾಗಿದ್ದವು. ಇಂದು 3ನೇ ಬಾರಿಗೆ ಅಗ್ನಿ ಅವಘಡ ಸಂಭವಿಸಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow