ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ಕತ್ರೀನಾ ಕೈಫ್: ಸಂತಾನಕ್ಕಾಗಿ ಸರ್ಪ ಸಂಸ್ಕಾರ ಪೂಜೆ ಮಾಡಿದ್ರಾ.!?

ಬಾಲಿವುಡ್ ಖ್ಯಾತ ನಟಿ ಕತ್ರೀನಾ ಕೈಫ್ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದಾರೆ. ಅವರು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಹೌದು ಆದಿ ಸುಬ್ರಹ್ಮಣ್ಯದ ಸರ್ಪ ಸಂಸ್ಕಾರ ಯಾಗಶಾಲೆಯಲ್ಲಿ ಪೂಜೆ ನೆರವೇರಿಸಲು ನಟಿ ಆಗಮಿಸಿದ್ದಾರೆ. ಇಂದು ಮತ್ತು ನಾಳೆ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಪೂಜೆ ನೆರವೇರಿಸಲಿದ್ದಾರೆ. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ.
ಸಾಮಾನ್ಯವಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡುತ್ತಾರೆ. ದೋಷ ನಿವಾರಣೆಗೆ ಅನೇಕರು ಸರ್ಪ ಸಂಸ್ಕಾರ ಪೂಜೆ ನೆರವೇರಿಸುತ್ತಾರೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೂಡ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ. ಸಂತಾನಕ್ಕಾಗಿ ನಟಿ ಸರ್ಪ ಸಂಸ್ಕಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?






