ಕೃಷ್ಣ ಜನ್ಮಾಷ್ಟಮಿಯಂದೇ ಅಗ್ನಿ ಅವಘಡ: ಇಬ್ಬರು ಸುಟ್ಟು ಕರಕಲು, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ
ಬೆಂಗಳೂರು: ನಗರದ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ.
ಮೃತ ವ್ಯಕ್ತಿಯನ್ನು ಮದನ್ ಸಿಂಗ್ ಎಂದು ಗುರುತಿಸಲಾಗಿದೆ. ಮುಂಜಾನೆ ಸುಮಾರು 3.30ರ ಹೊತ್ತಿಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.
ಘಟನೆ ನಡೆದ ಕಟ್ಟಡವು ನಾಲ್ಕು ಅಂತಸ್ತುಗಳಾಗಿದ್ದು, ಇದನ್ನು ಸಂದೀಪ್ ಹಾಗೂ ಬಾಲಕೃಷ್ಣ ಅವರದ್ದು ಎಂದು ತಿಳಿದುಬಂದಿದೆ. ನೆಲಮಹಡಿ ಹಾಗೂ ಎರಡನೇ ಮಹಡಿಯಲ್ಲಿ ಗೋಡೌನ್ ಇದ್ದು, ಮೊದಲ ಮಹಡಿಯಲ್ಲಿ ಮೂವರು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೂರನೇ ಮಹಡಿಯಲ್ಲಿ ಮದನ್ ಕುಮಾರ್ ಪತ್ನಿ ಸಂಗೀತಾ ಹಾಗೂ ಮಕ್ಕಳು ವಿಹಾನ್ ಮತ್ತು ನಿತೇಶ್ ವಾಸಿಸುತ್ತಿದ್ದರು.
ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳ ತೊಡಗಿಸಿಕೊಂಡಿದ್ದು, ಇನ್ನೂ ಮೂವರು ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?