ಕೆಲಸ ಮಾಡುವ ವಿಚಾರಕ್ಕೆ ಕಾರ್ಮಿಕರ ನಡುವೆ ಕಿರಿಕ್: ಓರ್ವ ಸಾವು!

ಫೆಬ್ರವರಿ 9, 2025 - 22:15
 0  16
ಕೆಲಸ ಮಾಡುವ ವಿಚಾರಕ್ಕೆ ಕಾರ್ಮಿಕರ ನಡುವೆ ಕಿರಿಕ್: ಓರ್ವ ಸಾವು!

ಬೆಂಗಳೂರು:- ಬೆಂಗಳೂರಿನ ಸಂಪಿಗೆಹಳ್ಳಿಯ ಆಕಾಶವಾಣಿ ಲೇಔಟ್‌ನಲ್ಲಿ ಕೆಲಸ ಮಾಡುವ ವಿಚಾರಕ್ಕೆ ಇಬ್ಬರು ಕಾರ್ಮಿಕರ ನಡುವೆ ಗಲಾಟೆಯಾಗಿದ್ದು, ಓರ್ವ ಕಾರ್ಮಿಕನನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಜರುಗಿದೆ. 

ಸೈಯದ್ ಮೆಹಬೂಬ್ ಪಾಷ ಮೃತ ಕಾರ್ಮಿಕ. ಇಬ್ಬರು ಕಾರ್ಮಿಕರು ಜೆಲ್ಲಿ, ಮರಳು ಟಾಟಾ ಏಸ್ ಗಾಡಿಗಳಿಗೆ ಲೋಡ್ ಮಾಡುವ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ರಾಜು ಎನ್ನುವ ವ್ಯಕ್ತಿ ಜೊತೆಗೂಡಿ ಮೃತ ಮೆಹಬೂಬ್ ಜೆಲ್ಲಿ, ಮರಳು ವ್ಯಾಪಾರ ಮಾಡುತ್ತಿದ್ದರು. ಭಾನುವಾರ ರಾತ್ರಿ ರಾಜು, ಮೆಹಬೂಬ್‌ಗೆ ಕರೆ ಮಾಡಿ ಬಾಡಿಗೆಯಿದೆ ಬಾ ಎಂದು ಕರೆದಿದ್ದ. 8:40ಕ್ಕೆ ಸ್ಥಳಕ್ಕೆ ಹೋಗಿದ್ದ ಮೆಹಬೂಬ್ ಖಾನ್ ಅಲ್ಲಿದ್ದ ಖಾನಿಯಾ ಎನ್ನುವ ಮತ್ತೊಬ್ಬ ಕಾರ್ಮಿಕ ಜೊತೆ ಗಲಾಟೆ ಮಾಡಿಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು ಸಿಮೆಂಟ್ ಚೀಲ ಕಟ್ ಮಾಡಲು ಬಳಸುತ್ತಿದ್ದ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಖಾನಿಯಾ ಎಸ್ಕೇಪ್ ಆಗಿದ್ದಾನೆ.

ಬಳಿಕ ಅಂಗಡಿ ಪಕ್ಕದ ಪರಿಚಯಸ್ಥರು ಮೆಹಬೂಬ್ ಕುಟುಂಬಸ್ಥರಿಗೆ ಕರೆ ಮಾಡಿ ಯಾರೋ ಹೊಡೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಸದ್ಯ ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೋಲಿಸರು ಮುಂದಾಗಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow