ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡ ಕೂಡಲೇ ಕಾಂಗ್ರೆಸ್ ದೇಶಾದ್ಯಂತ ಜಾತಿ ಜನಗಣತಿ ನಡೆಸಲಿದೆ: ರಾಹುಲ್ ಗಾಂಧಿ

ಜನವರಿ 28, 2025 - 22:18
 0  14
ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡ ಕೂಡಲೇ ಕಾಂಗ್ರೆಸ್ ದೇಶಾದ್ಯಂತ ಜಾತಿ ಜನಗಣತಿ ನಡೆಸಲಿದೆ: ರಾಹುಲ್ ಗಾಂಧಿ

ನವದೆಹಲಿ: ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡ ಕೂಡಲೇ ಕಾಂಗ್ರೆಸ್ ದೇಶಾದ್ಯಂತ ಜಾತಿ ಜನಗಣತಿ ನಡೆಸಲಿದೆ ಎಂದು  ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡ ಕೂಡಲೇ ಕಾಂಗ್ರೆಸ್ ದೇಶಾದ್ಯಂತ ಜಾತಿ ಜನಗಣತಿ ನಡೆಸಲಿದೆ ಎಂದು ಘೋಷಿಸಿದರು. ಆದರೆ, ಪ್ರಧಾನಿ ನರೇಂದ್ರ ಮೋದಿ ಎಂದಿಗೂ ಜಾತಿ ಜನಗಣತಿಯನ್ನು ಮಾಡಲಾರರು ಎಂದು ರಾಹುಲ್ ಟೀಕಿಸಿದ್ದಾರೆ.

ಕಾಂಗ್ರೆಸ್ ಶೇ. 50ರಷ್ಟು ಮೀಸಲಾತಿಯನ್ನು ಮುರಿದು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಈ ನಿಟ್ಟಿನಲ್ಲಿ ಕಾನೂನನ್ನು ತರುತ್ತದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೋಟ್ಯಾಧಿಪತಿಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ದೇಶದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗುತ್ತಿದೆ ಮತ್ತು ದೇಶದ ಸಂಪತ್ತನ್ನು ಕೆಲವೇ ಕೆಲವು ಬಂಡವಾಳಶಾಹಿಗಳಿಗೆ ಹಸ್ತಾಂತರಿಸಲಾಗುತ್ತಿದೆ. ದಲಿತರು, ಹಿಂದುಳಿದವರು, ಬುಡಕಟ್ಟು ಜನಾಂಗದವರು ಮತ್ತು ಬಡವರನ್ನು ಮತ್ತೊಮ್ಮೆ ಗುಲಾಮರನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow