ಕೊರೊನಾ ಮಹಾಮಾರಿಯ ಆರ್ಭಟ: ಆರೋಗ್ಯ ಇಲಾಖೆ ಶಾಲೆಗಳಿಗೆ ಮಾರ್ಗಸೂಚಿ ರಿಲೀಸ್

ಮೇ 31, 2025 - 14:05
 0  12
ಕೊರೊನಾ ಮಹಾಮಾರಿಯ ಆರ್ಭಟ: ಆರೋಗ್ಯ ಇಲಾಖೆ ಶಾಲೆಗಳಿಗೆ ಮಾರ್ಗಸೂಚಿ ರಿಲೀಸ್

ಬೆಂಗಳೂರು: ರಾಜ್ಯಕ್ಕೆ ಕೊರೊನಾ ರೀ ಎಂಟ್ರಿ ಕೊಟ್ಟಿದೆ. ರಾಜ್ಯ ರಾಜಧಾನಿಯನ್ನೇ ತನ್ನ ಅಡ್ಡ ಮಾಡಿಕೊಂಡು ಸೋಂಕಿನ ಸುಂಟರಗಾಳಿ ಹಬ್ಬಿಸುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಕಂಡುಬಂದಿದ್ದು, ಸೈಲೆಂಟ್ಆಗಿಯೇ ತನ್ನ ಅಧಿಪತ್ಯ ಸಾಧಿಸುತ್ತಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 200 ಗಡಿ ದಾಟಿದ್ದು, ಆತಂಕ ಮೂಡಿಸಿದೆ.ಇದರ ನಡುವೆ ಶಾಲೆಗಳು ಸಹ ಪ್ರಾರಂಭವಾಗಿವೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ, ಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದೆ.

ಶಾಲೆಗಳಿಗೆ ಹೊಸ ಮಾರ್ಗಸೂಚಿಯಲ್ಲಿ ಏನಿದೆ?
* ಮಕ್ಕಳಿಗೆ ನೆಗಡಿ, ಜ್ವರ, ಕೆಮ್ಮು ಇದ್ರೆ ಶಾಲೆಗೆ ಕಳುಹಿಸದೇ ವೈದ್ಯರ ಸಲಹೆ ಪಡೆದುಕೊಂಡು ಸೂಕ್ತ ಚಿಕಿತ್ಸೆ, ಆರೈಕೆ ನೀಡಬೇಕು
* ಜ್ವರ ಸಂಪೂರ್ಣ ಗುಣಮುಖವಾದ ಬಳಿಕ ಮಕ್ಕಳನ್ನ ಶಾಲೆಗೆ ಕಳಿಸಬೇಕು
* ಶಾಲೆಗೆ ಬಂದ ನಂತ್ರ ಮಕ್ಕಳಲ್ಲಿ ಜ್ವರ ಶೀತ ಗುಣಲಕ್ಷಣಗಳು ಕಂಡುಬಂದ್ರೇ ತಕ್ಷಣ ಪೋಷಕರ ಗಮನಕ್ಕೆ ತಂದು ಮನೆಗೆ ಕಳುಹಿಸಬೇಕು
* ಶಾಲಾ ಶಿಕ್ಷಕರಿಗೆ ಸಿಬ್ಬಂದಿಗೆ ಜ್ವರ, ಶೀತದಂತಹ ಲಕ್ಷಣ ಕಂಡುಬಂದ್ರೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
* ಸ್ಯಾನಿಟೈಸ್ ಬಳಕೆ, ಕೈಗಳ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳೋದು ಸೇರಿದಂತೆ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನ ಶಾಲೆಯಲ್ಲಿ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ 150 ಗಡಿ ದಾಟಿದ ಕೊರೊನಾ ಪ್ರಕರಣ

ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್ಸ್ಪಾಟ್ ಆಗುತ್ತಿದೆ.

ಐಎಲ್ ಮತ್ತು ಸಾರಿ ಕೇಸ್ಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸರ್ಕಾರ ಸೂಚಿಸಿದೆ. ಇನ್ನು ಬೆಂಗಳೂರಿನಲ್ಲಿ ಕೇಸ್ ಏರಿಕೆ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow