ಕೋರ್ಟ್ ಆದೇಶ ನಕಲು ಮಾಡಿ ವಂಚನೆ: ಆರೋಪಿ ಅರೆಸ್ಟ್!

ಮಾರ್ಚ್ 6, 2025 - 22:01
 0  6
ಕೋರ್ಟ್ ಆದೇಶ ನಕಲು ಮಾಡಿ ವಂಚನೆ: ಆರೋಪಿ ಅರೆಸ್ಟ್!

ಬೆಂಗಳೂರು:- ವಿಧಾನಸೌಧ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿಹೈಕೋರ್ಟ್ ಆದೇಶವನ್ನೇ ನಕಲಿ ಮಾಡಿ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. 

ವಿಜೇತ್ ಬಂಧಿತ ಆರೋಪಿ. ಆರೋಪಿಗಳು ಹೈಕೋರ್ಟ್ ನೀಡುವ ಆದೇಶದ ಪ್ರತಿಯನ್ನೇ ಹೋಲುವ ನಕಲಿ ಆದೇಶ ಪ್ರತಿ ತಯಾರಿಸುತ್ತಿದ್ದರು. ಅದನ್ನು ಬಳಸಿಕೊಂಡು ಅನೇಕರನ್ನು ವಂಚಿಸಿದ್ದರು. ಒಬ್ಬ ಆರೋಪಿಯಂತೂ, ತನ್ನ ಗರ್ಲ್ ಫ್ರೆಂಡನ್ನೇ ವಂಚಿಸಿದ್ದ ಎಂಬುದು ಗೊತ್ತಾಗಿದೆ 

ಆರೋಪಿ ವಿಜೇತ್, ಇಡಿ ಹಣ ಮುಟ್ಟುಗೋಲು ಹಾಕಿಕೊಂಡ ಪ್ರಕರಣವೊಂದಕ್ಕೆ ಸಂಬಂಧಿಸಿದ್ದು
 ಎಂಬ ನಂಬಿಕೆ ಬರುವ ರೀತಿಯಲ್ಲಿ ಹೈಕೋರ್ಟ್ ಆದೇಶವನ್ನೇ ಹೋಲುವಂತೆ ನಕಲಿ ಆದೇಶ ಪ್ರತಿ ತಯಾರಿಸಿದ್ದ.

ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಮುಟ್ಟುಗೋಲು ಹಾಕಿಕೊಂಡಿದೆ. ಆದರೆ, ಹೈಕೋರ್ಟ್​ ಈ ತಮ್ಮ ಪರ ತೀರ್ಪು ನೀಡಿದ್ದು, ಸೀಜ್ ಮಾಡಿದ ಹಣವನ್ನು ಜಾರಿ ನಿರ್ದೇಶನಾಲಯ ನಮಗೆ ನೀಡಬೇಕಿದೆ. ಆ ಹಣವನ್ನು ಬಿಡಿಸಿಕೊಳ್ಳಲು ಸ್ವಲ್ಪ ಹಣ ಬೇಕಾಗಿದೆ. ಮೊತ್ತ ಕೈಸೇರಿದ ಕೂಡಲೇ ಹಿಂದಿರುಗಿಸುವುದಾಗಿ ಆರೋಪಿಗಳು ಜನರನ್ನು ವಂಚಿಸುತ್ತಿದ್ದರು. ಹೈಕೋರ್ಟ್ ಆದೇಶವನ್ನೇ ಹೋಲುವ ನಕಲಿ ಪ್ರತಿ ತಯಾರಿಸಿ ಜನರಲ್ಲಿ ನಂಬಿಕೆ ಬರುವಂತೆ ಮಾಡಿ ಹಣ ಪೀಕುತ್ತಿದ್ದರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow