ಕ್ಷುಲ್ಲಕ ವಿಚಾರಕ್ಕೆ ಕಿರಿಕ್: ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ!

ಚಿಕ್ಕೋಡಿ:- ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಹೊರವಲಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಜಗಳ ನಡೆದು, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜರುಗಿದೆ.
25 ವರ್ಷದ ಹುಸೇನ್ ಸಾಬ್ ದಸ್ತಗಿರ ಪರೀಟ್ ಕೊಲೆಯಾದ ದುರ್ದೈವಿ. 25 ವರ್ಷದ ಇಮ್ತಿಯಾಜ್ ಶೇಗಡಿ ಕೊಲೆ ಮಾಡಿರುವ ಆರೋಪಿ. ಹುಸೇನ್ ಸಾಬ್ ಪರೀಟ್ ಹಾಗೂ ಸ್ನೇಹಿತ ಇಮ್ತಿಯಾಜ್ ಇಬ್ಬರು ಅಂಕಲಿ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಮೀನು ಹಿಡಿಯಲು ಬಂದಿದ್ದರು
ಮಹಾರಾಷ್ಟ್ರದ ಸಾಂಗಲಿ ನಗರಕ್ಕೆ ಹೋಗುವ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಕೋಪಗೊಂಡ ಇಮ್ತಿಯಾಜ್ ಕಟ್ಟಿಗೆಯಿಂದ ಹುಸೇನ್ ಸಾಬ್ ತಲೆಗೆ ಹೊಡೆದ ಪರಿಣಾಮ ಹುಸೇನ್ ಸಾಬ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






