ಖಾಸಗಿ ಬಸ್- ಲಾರಿ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಮೂವರ ದುರ್ಮರಣ! ಹಲವರು ಗಂಭೀರ
ಮೈಸೂರು: ಮೈಸೂರು-ಕೊಡಗು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಸಿಮೆಂಟ್ ಲಾರಿ ಮತ್ತು ಬಸ್ ನಡುವೆ ಈ ದುರಂತ ಸಂಭವಿಸಿದೆ.
ಅಪಘಾತದ ಭೀಕರತೆಗೆ ಬಸ್ ಚಾಲಕ ಮತ್ತು ಕ್ಲೀನರ್ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಲಾರಿಗೆ, ಕೇರಳದಿಂದ ಮೈಸೂರಿನ ಕಡೆ ಬರುತ್ತಿದ್ದ ಬಸ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸಿಮೆಂಟ್ ಲಾರಿ ಪಲ್ಟಿಯಾಗಿದೆ. ಅಪಘಾತಕ್ಕೊಳಗಾದ ಎರಡೂ ವಾಹನಗಳು ಕೇರಳ ಮೂಲದ್ದಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?