ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ..! ಕಾರಣ ನಿಗೂಢ

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. 27 ವರ್ಷದ ಗೃಹಿಣಿ ಸಂದ್ಯಾ ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಈ ಘಟನೆ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಅನುಮಾನ ಹುಟ್ಟಿಸಿ, ಕುಟುಂಬದವರ ಮಧ್ಯೆ ಉದ್ವಿಗ್ನತೆ ಉಂಟಾಗಿದೆ.
ಮೃತ ಮಹಿಳೆಯ ತವರು ಮನೆಯವರು ಈ ದುರಂತಕ್ಕೆ ಗಂಡ ಅನಂತ್ ಕುಮಾರ್ ಹಾಗೂ ಅವರ ಕುಟುಂಬಸ್ಥರೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅವರಿಗೆ ಗೃಹಿಣಿಗೆ ನಿರಂತರವಾಗಿ ಕಿರುಕುಳ ನೀಡಲಾಗುತ್ತಿದ್ದು, ಇದೇ ಕಾರಣದಿಂದಾಗಿ ಕೊನೆಗೆ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂದ್ಯಾ ಶವವನ್ನು ಕಾರಿನಲ್ಲಿ ಪೊಲೀಸ್ ಠಾಣೆ ಎದುರು ಇಟ್ಟುಕೊಂಡು, ಗಂಡನ ಮನೆಯವರನ್ನು ಬಂಧಿಸಲು ಆಗ್ರಹಿಸಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು.ಘಟನೆ ಸಂಭವಿಸಿದ್ದು ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು,
ಗಂಡ ಹಾಗೂ ಮನೆಯವರು ಈತನಕ ನಾಪತ್ತೆಯಾಗಿರುವುದಾಗಿ ದೂರಲಾಗಿದೆ.ಸಂದ್ಯಾ ಅವರು ಏಳು ವರ್ಷಗಳ ಹಿಂದೆ ಅನಂತ್ ಕುಮಾರ್ ಎಂಬುವವರನ್ನು ಮದುವೆಯಾಗಿದ್ದರು. ಮದುವೆಯಾದ ದಿನದಿಂದಲೂ ಗಂಡನ ಮನೆಯವರು ಮಹಿಳೆಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪವಿದೆ.
ನಿಮ್ಮ ಪ್ರತಿಕ್ರಿಯೆ ಏನು?






