ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಯುವಕರಿಂದ ಕಲ್ಲು ತೂರಾಟ: ಮದ್ದೂರಿನಲ್ಲಿ ಉದ್ವಿಗ್ನ ಸ್ಥಿತಿ
ಮಂಡ್ಯ:- ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿದ್ದು, ಮದ್ದೂರಿನಲ್ಲಿ ಉದ್ವಿಗ್ನ ಸ್ಥಿತಿ ಕಂಡು ಬಂದಿದೆ.
ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಮದ್ದೂರಿನ ಬೀದಿಗಳಲ್ಲಿ ಗಣಪತಿ ಮೆರವಣಿ ನಡೆಸುತ್ತಿದ್ದರು. ಈ ವೇಳೆ ಮಸೀದಿ ಬಳಿಗೆ ಮೆರವಣಿಗೆ ಬಂದಿದ್ದು ಈ ವೇಳೆ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಿದ್ದಾರೆ. ಈ ವೇಳೆ ಕಲ್ಲು ತೂರಿದವರ ಮೇಲೆ ಪ್ರತಿಯಾಗಿ ಕಲ್ಲು ತೂರಿದ್ದಾರೆ. ಈ ವೇಳೆ ನಾಲ್ವರು ಹೋಮ್ ಗಾರ್ಡ್ ಸೇರಿದಂತೆ ಎಂಟು ಮಂದಿಗೆ ಗಾಯವಾಗಿದೆ.
ರಾತ್ರಿ 7.30ರ ಸಂಧರ್ಭದಲ್ಲಿ ಈ ಗಲಾಟೆ ನಡೆದಿದೆ. ಮೊದಲಿಗೆ ಪ್ರಮುಖ ಬೀದಿಗಳಲ್ಲಿ ಗಣಪತಿ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು, ಮೈಕ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದರಂತೆ. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಾದ ಬಳಿಕ ಲೈಟ್ ಆಫ್ ಮಾಡಿ ಏಕಾಏಕಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿದೆ. ಕಲ್ಲು ತೂರಾಟದಿಂದ ಕ್ಷಣಕಾಲ ಗಾಬರಿಗೊಂಡ ಯುವಕರು ಕಲ್ಲು ತೂರಿದ ಕಡೆಗೆ ಇವರು ಕಲ್ಲು ಎಸೆದಿದ್ದಾರೆ.
ನಾವು ಸುಮ್ಮನಿದ್ದರೂ ನಮ್ಮ ಮೇಲೆ ಈ ರೀತಿ ದಾಳಿ ಮಾಡಿದ್ದಾರೆ. ಮೊನ್ನೆ ಮೊನ್ನೆಯಷ್ಟೆ ಅವರ ಹಬ್ಬ ಮಾಡಿದಾಗ ನಾವು ಗಲಾಟೆ ಮಾಡಿದ್ದವ ಎಂದು ಹಿಂದೂ ಯುವಕರು ಪ್ರಶ್ನೆ ಮಾಡುತ್ತಿದ್ದಾರೆ
ನಿಮ್ಮ ಪ್ರತಿಕ್ರಿಯೆ ಏನು?