ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ - ಪತಿ ಜೊತೆಗಿರೋ ಫೋಟೋಸ್ ಡಿಲೀಟ್

ಖ್ಯಾತ ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯ ಜೀವನ ಮುರಿದು ಬಿದ್ದಿದೆ. ಪತಿ ಧನಂಜಯ್ ಶರ್ಮ ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಅಖಿಲಾ ನಿರ್ಧರಿಸಿದ್ದಾರೆ. ಪುತ್ತೂರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮ ಅರ್ಜಿ ಸಲ್ಲಿಸಿದ್ದಾರೆ. ಹೌದು ‘ಕನ್ನಡ ಕೋಗಿಲೆ’ ಕಾರ್ಯಕ್ರಮದ ಮೂಲಕ ಮನೆ ಮಾತಾಗಿರುವ ಗಾಯಕಿ ಅಖಿಲಾ ಪಜಿಮಣ್ಣು 2021ರ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರೆ, ಅದರ ಮರುವರ್ಷ ವಿವಾಹವಾಗಿದ್ದರು. ನಿಶ್ಚಿತಾರ್ಥ ಹಾಗೂ ಮದುವೆಯ ವಿಡಿಯೋವನ್ನು ಅವರು ತಮ್ಮ ಇನ್ಸ್‌ಟಾಗ್ರಾಮ್ ಪೇಜ್‌ನಲ್ಲಿ ಹಂಚಿಕೊಂಡಿದ್ದರು.
ಅಖಿಲಾ ಪಜಿಮಣ್ಣು ದಾಂಪತ್ಯ ಜೀವನದಿಂದ ದೂರವಿರಲು ನಿರ್ಧರಿಸಿ ಡಿವೋರ್ಸ್‌ಗೆ ಅರ್ಜಿ ನೀಡಿದ ಬೆನ್ನಲ್ಲೇ ತನ್ನ ಸೋಶಿಯಲ್ ಮೀಡಿಯಾ ಖಾತೆಗಳಿಂದ ಪತಿ ಫೋಟೋಗಳು, ವಿಡಿಯೋಗಳನ್ನು ಡಿಲೀಟ್ ಮಾಡಿದ್ದಾರೆ. ಈ ಮೊದಲು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ನಿಶ್ಚಿತಾರ್ಥ, ಮದುವೆ, ಟ್ರಿಪ್ ಸೇರಿದಂತೆ ಹಲವು ಫೋಟೋ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದರು. ಇದೀಗ ಎಲ್ಲವನ್ನು ಡಿಲೀಟ್ ಮಾಡಿದ್ದಾರೆ.
ಅಖಿಲಾ ಮೂರು ವರ್ಷಗಳ ಹಿಂದೆ ಅಮೆರಿಕದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಧನಂಜಯ್ ಶರ್ಮಾ ಅವರೊಂದಿಗೆ ವಿವಾಹವಾಗಿದ್ದರು. ಆದ್ರೀಗ ಇವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಇಬ್ಬರು ಪರಸ್ಪರ ಒಪ್ಪಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಗಾಯಕಿ ಅಖಿಲಾ ಪಜಿಮಣ್ಣು ಮತ್ತು ಪತಿ ಟಿ.ಆರ್ ಧನರಾಜ್ ಶರ್ಮಾ ಪರಸ್ಪರ ಒಪ್ಪಿ ಇದೇ ಜೂನ್ 12 ರಂದು ಪುತ್ತೂರು ಕೋರ್ಟ್‌ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪುತ್ತೂರಿನ ವಕೀಲ ಮಹೇಶ್ ಕಜೆ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಇಬ್ಬರದ್ದೂ ಅರೇಂಜ್ಡ್ ಮ್ಯಾರೇಜ್. ಎರಡು ಕುಟುಂಬಗಳ ಸಮ್ಮುಖದಲ್ಲಿ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಎಲ್ಲವೂ ಖುಷಿ ಖುಷಿಯಾಗಿಯೇ ಇದ್ದ ಇಬ್ಬರ ದಾಂಪತ್ಯದಲ್ಲಿ ಅಂತಹದ್ದೇನಾಯ್ತೋ ಗೊತ್ತಿಲ್ಲ. ಬೇರೆಯಾಗುವುದಕ್ಕೆ ಇಬ್ಬರೂ ನಿರ್ಧರಿಸಿದ್ದಾರೆ. ಸದ್ಯ ಗಾಯಕಿಯ ಅಭಿಮಾನಿಗಳಿಗೆ ಈ ಸುದ್ದಿ ಬೇಸರ ಮೂಡಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






