ಗುಡ್‌ ನ್ಯೂಸ್: Bigg Boss ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗ್ರೀನ್ ಸಿಗ್ನಲ್!

ಅಕ್ಟೋಬರ್ 8, 2025 - 14:04
 0  19
ಗುಡ್‌ ನ್ಯೂಸ್: Bigg Boss ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗ್ರೀನ್ ಸಿಗ್ನಲ್!

ಬೆಂಗಳೂರು: ಬಿಗ್​​ಬಾಸ್ ಕನ್ನಡ 12ರ ಸೆಟ್ ನಿರ್ಮಾಣ ಮಾಡಲಾಗಿದ್ದ ವೆಲ್ಸ್ ಸ್ಟುಡಿಯೋಸ್ ಒಡೆತನದ ಜಾಲಿವುಡ್ ಸ್ಟುಡಿಯೋಸ್ ಅನ್ನು ಮಾಲಿನ್ಯ ಇಲಾಖೆ ಅಧಿಕಾರಿಗಳ ದೂರಿನ ಮೇರೆಗೆ ಬಂದ್ ಮಾಡಲಾಗಿದೆ. ಇದರಿಂದಾಗಿ ಬಿಗ್​​ಬಾಸ್ ಶೋ ಬಂದ್ ಆಗಿದೆ. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12' ಶೋಗೆ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಸ್ಥಿಕೆ ವಹಿಸಿದ್ದು, ತಪ್ಪು ಸರಿಪಡಿಸಿಕೊಳ್ಳಲು ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಬಿಗ್ ಬಾಸ್ ಕಾರ್ಯಕ್ರಮ ನಡೆಯುವ ಜಾಲಿವುಡ್ ಸ್ಟುಡಿಯೋವನ್ನು ಉದ್ಘಾಟನೆ ಮಾಡಿದ್ದೇ ನಾನು. ಅಲ್ಲಿ ಏನಾಗಿದೆ ಎಂಬ ಬಗ್ಗೆ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ. ಜೊತೆಗೆ ಉದ್ಯೋಗ ಮುಖ್ಯ ಎಂದೂ ಹೇಳಿದ್ದೇನೆ. ಖಾಸಗಿಯವರು ಹೂಡಿಕೆ ಮಾಡಿರುತ್ತಾರೆ. ಇದಕ್ಕೆ ಏನು ಪರಿಹಾರ ಕಂಡುಕೊಳ್ಳಬಹುದೋ ಅದಕ್ಕೆ ಅವಕಾಶ ನೀಡಿ ಎಂದೂ ತಿಳಿಸಿದ್ದೇನೆ. ಬಿಗ್ ಬಾಸ್ ಒಂದೇ ಅಲ್ಲ. ಎಲ್ಲಾ ಮನರಂಜನಾ ಕಾರ್ಯಕ್ರಮಗಳು ನಡೆಯಬೇಕು ಎಂದರು.

ಅದಲ್ಲದೆ  ಬಿಗ್‌ ಬಾಸ್‌ ನಡೆಯುತ್ತಿರುವ ಜಾಲಿವುಡ್‌ ಸ್ಟುಡಿಯೋಗೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಯವರು ಸಮಸ್ಯೆ ಇತ್ಯರ್ಥ್ಯಕ್ಕೆ 10 ದಿನಗಳ ತಾತ್ಕಾಲಿಕ ಕಾಲಾವಕಾಶ ನೀಡಿದ್ದಾರೆ.ಅ.6 ರಂದು ನೋಟಿಸ್‌ ನೀಡಿ ಅ.7 ರಂದು ಬೀಗ ಹಾಕಿದ್ದನ್ನು ಪ್ರಶ್ನಿಸಿ ನಾವು ಹೈಕೋರ್ಟ್‌ಗೆ ರಿಟ್‌ ಅರ್ಜಿ ಹಾಕಿದ್ದೆವು. ಈಗ ಜಿಲ್ಲಾಡಳಿತ 10 ದಿನಗಳ ಕಾಲಾವಕಾಶ ನೀಡಿದ್ದರಿಂದ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹಿಂದಕ್ಕೆ ಪಡೆಯುತ್ತೇವೆ ಎಂದು ಜಾಲಿವುಡ್‌ ಸ್ಟುಡಿಯೋ ಪರ ವಕೀಲ ವಿಶ್ವಾಸ್‌ ಗೌಡ ಹೇಳಿದರು.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow