ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ

ಡಿಸೆಂಬರ್ 29, 2024 - 16:00
 0  15
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರುಬೀದರ್ ಯುವ ಗುತ್ತಿಗೆದಾರ ಸಚಿನ್ ಪ್ರಕರಣದ ವಿವಾದ ದಿನದಿಂದ ದಿನಕ್ಕೆ ಜೋರಾಗ್ತಿದೆ. ಸಚಿನ್ ಜೀವ ತೆಗೆದುಕೊಳ್ಳುವುದಕ್ಕೂ ಮುನ್ನ ಬರೆದಿಟ್ಟಿರಿವ ನೋಟ್ಅನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ, ಸಚಿವ ಪ್ರಿಯಾಂಕ್ಖರ್ಗೆಯ ತಲೆದಂಡಕ್ಕೆ ಪಟ್ಟು ಹಿಡಿದು ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗಿದೆ.

ಇದರ ಬೆನ್ನಲ್ಲೇ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಇಂದು ಕಟ್ಟಿತೂಗಾಂವ್ನಲ್ಲಿರುವ ಸಚಿನ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ವೇಳೆ ಮೃತ ಸಚಿನ್ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರ ನೀಡುವಾಗಿ ಘೋಷಿಸಿದರು. ಬಿಜೆಪಿ ನಿಯೋಗ ಭೇಟಿ ಮೊದಲೇ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಹಾರ ಘೋಷಿಸಿದ್ದಾರೆ.

ಬೀದರ್ನಲ್ಲಿ ಯುವ ಗುತ್ತಿಗೆದಾರ ಸಚಿನ್ (26 ವರ್ಷ) ಬಾಲ್ಕಿಯಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಅತ್ಮಹತ್ಯೆಗೆ ಶರಣಾಗಿದ್ದ. ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು,

ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ತಳಕು ಹಾಕಿಕೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಎಂಬುವವರು 15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್ನೀಡದೆ ವಂಚನೆ ಮಾಡಿದ್ದು, ಮಾತ್ರವಲ್ಲದೆ 1 ಕೋಟಿ ಹಣ ನೀಡುವಂತೆ ಒತ್ತಡ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಡೆತ್ನೋಟ್ನಲ್ಲಿ ಉಲ್ಲೇಖವಾಗಿದೆ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow