ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ..?
ಬೆಂಗಳೂರು: ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಜನರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದರು.
ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಸಾಧನಾ ಸಮಾವೇಶವನ್ನು ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಆಗಮಿಸುವ ಸಾಧ್ಯತೆಯಿದೆ ಎಂದರು.
ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಅನರ್ಹತೆಯ ಕುರಿತ ಪ್ರಶ್ನೆಗೆ ಉತ್ತರಿಸಿ, ನ್ಯಾಯಾಲಯ ಅವರಿಗೆ ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ, ಪಕ್ಷದ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಗಂಗಾವತಿ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಗೆಲ್ಲುತ್ತದೆ. ಪ್ರಜಾಪ್ರಭುತ್ವದಲ್ಲಿ ಟೀಕಿಸುವುದು ಸಹಜ. ಆದರೆ ನಮ್ಮ ಸರ್ಕಾರದ ಸಾಧನೆ, ನಮ್ಮ ಬದ್ಧತೆಯ ಬಗ್ಗೆ ಜನರಿಗೆ ತಿಳಿದೇ ತಿಳಿಯುತ್ತದೆ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?