ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಿರುತೆರೆ ನಟ ಚರಿತ್ ಬಾಳಪ್ಪ ಬಂಧನ!

ಬೆಂಗಳೂರು: ಕನ್ನಡದ ಮುದ್ದುಲಕ್ಷ್ಮಿ, ಲವಲವಿಕೆ, ಸರ್ಪಸಂಬಂಧ ಸೇರಿದಂತೆ ತೆಲುಗಿನ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದ ನಟ ಚರಿತ್ ಬಾಳಪ್ಪ ಅರೆಸ್ಟ್ ಆಗಿದ್ದಾರೆ. ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.
ನಟ ಚರಿತ್ನನ್ನು ಆರ್ಆರ್ ನಗರ ಪೊಲೀಸರು ಬಂಧಿಸಿದ್ದು, ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಹಾಗೂ ಹಲ್ಲೆ ಮಾಡಿರುವುದಾಗಿ ನಟನ ವಿರುದ್ಧ ಯುವತಿ ಆರೋಪಿಸಿದ್ದಾರೆ. ನಿನ್ನನ್ನ ಪ್ರೀತಿಸುತ್ತೇನೆ ಎಂದು ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾನೆ.
ಜೊತೆಗೆ ಯುವತಿ ವಾಸ ಮಾಡುತ್ತಿದ್ದ ಮನೆಗೆ ನುಗ್ಗಿ ಸಹಚರರ ಜೊತೆ ಕಿರುಕುಳ ನೀಡಿದ್ದಾನೆ. ಹಣಕ್ಕೂ ಬೇಡಿಕೆಯಿಟ್ಟಿದ್ದು, ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವೀಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಸದ್ಯ ಈ ಘಟನೆ ಸಂಬಂಧಿಸಿದಂತೆ ಪ್ರಕೃಣ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






