ಗೋ ಕಳ್ಳತನ, ಹತ್ಯೆ ಮಾಡೋರನ್ನು ರಸ್ತೆಯಲ್ಲಿ ಸರ್ಕಲಲ್ಲಿ ನಿಲ್ಲಿಸಿ ಗುಂಡಿಕ್ಕಬೇಕು: ಮಂಕಾಳ ವೈದ್ಯ

ಫೆಬ್ರವರಿ 4, 2025 - 12:03
 0  15
ಗೋ ಕಳ್ಳತನ, ಹತ್ಯೆ ಮಾಡೋರನ್ನು ರಸ್ತೆಯಲ್ಲಿ ಸರ್ಕಲಲ್ಲಿ ನಿಲ್ಲಿಸಿ ಗುಂಡಿಕ್ಕಬೇಕು: ಮಂಕಾಳ ವೈದ್ಯ

ಕಾರವಾರ: ಗೋ ಕಳ್ಳತನ, ಹತ್ಯೆ ಮಾಡೋರನ್ನು ರಸ್ತೆಯಲ್ಲಿ ಸರ್ಕಲಲ್ಲಿ ನಿಲ್ಲಿಸಿ ಗುಂಡಿಕ್ಕಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ  ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವು ಪೂಜೆ ಮಾಡುವ ಪ್ರಾಣಿ ಗೋವು. ಅದನ್ನು ನಾವು ಬಹಳ ಪ್ರೀತಿಯಿಂದ ಸಾಕುತ್ತೇವೆ. ಅದರ ಹಾಲನ್ನು ಕುಡಿದು ನಾವು ಬದುಕುತ್ತಿದ್ದೇವೆ.

ಪೊಲೀಸ್ ಇಲಾಖೆಯವರಿಗೆ ನೇರವಾಗಿ ಹೇಳಿದ್ದೇನೆ. ಅವರು, ಇವರು ಎಂದು ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಅಷ್ಟಾಗಿಯೂ ಕ್ರೌರ್ಯ ಮುಂದುವರಿದರೆ, ಬಹುಶಃ ಹೇಳಿದರೆ ತಪ್ಪಾಗಬಹುದೇನೋ, ರಸ್ತೆಯಲ್ಲಿ ಸರ್ಕಲಲ್ಲಿ ನಿಲ್ಲಿಸಿ ಗುಂಡುಹಾರಿಸುವಂತೆ ಮಾಡುತ್ತೇನೆ ಎಂದು ಮಂಕಾಳ ವೈದ್ಯ ಹೇಳಿದ್ದಾರೆ. 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow