ಗೌರ್ಮೆಂಟ್ ಜಾಬ್ ಸರ್ಚ್ ಮಾಡ್ತಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: ಅರ್ಹರು ಕೂಡಲೇ ಅರ್ಜಿ ಸಲ್ಲಿಸಿ!

ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಭಾರತೀಯ ರೈತರ ರಸಗೊಬ್ಬರ ಸಹಕಾರಿ ನಿಯಮಿತ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಕೃಷಿ ಪದವೀಧರ ತರಬೇತಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ agt.iffco.in ಗೆ ಭೇಟಿ ನೀಡುವ ಮೂಲಕ ಮಾರ್ಚ್ 15 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಠ ಶೇ. 60 ಅಂಕಗಳೊಂದಿಗೆ ಬಿಎಸ್ಸಿ (ಕೃಷಿ) ಪದವಿ ಪಡೆದಿರುವ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಎಸ್‌ಸಿ/ಎಸ್‌ಟಿ ವರ್ಗಕ್ಕೆ ಕನಿಷ್ಠ ಶೇ. 55 ಅಂಕಗಳು ಕಡ್ಡಾಯ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 30 ವರ್ಷಗಳು. ಆದರೆ ಕಾಯ್ದಿರಿಸಿದ ವರ್ಗಕ್ಕೆ ನಿಯಮಾನುಸಾರ ಸಡಿಲಿಕೆ ನೀಡಲಾಗುವುದು.
ಅಭ್ಯರ್ಥಿಗಳು ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಅಹಮದಾಬಾದ್, ಬೆಂಗಳೂರು, ದೆಹಲಿ, ಕೋಲ್ಕತ್ತಾ, ಚೆನ್ನೈ, ಲಕ್ನೋ, ನಾಗ್ಪುರ, ಪಾಟ್ನಾ, ಚಂಡೀಗಢ, ಡೆಹ್ರಾಡೂನ್, ಭೋಪಾಲ್, ಹೈದರಾಬಾದ್ ಸೇರಿದಂತೆ ಹಲವು ನಗರಗಳಲ್ಲಿ ಆನ್‌ಲೈನ್ ಪರೀಕ್ಷೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 1 ವರ್ಷದ ತರಬೇತಿ ನೀಡಲಾಗುವುದು, ಇದರಲ್ಲಿ ಅವರಿಗೆ ತಿಂಗಳಿಗೆ 33,000 ರೂ. ವೇತನ ನೀಡಲಾಗುವುದು. ತರಬೇತಿ ಯಶಸ್ವಿಯಾಗಿ ಪೂರ್ಣಗೊಂಡ ನಂತರ ವೇತನವನ್ನು ತಿಂಗಳಿಗೆ 37,000 ರೂ.ಗಳಿಗೆ ಹೆಚ್ಚಿಸಲಾಗುತ್ತದೆ
ಮೊದಲು ಅಧಿಕೃತ ವೆಬ್‌ಸೈಟ್ agt.iffco.in ಗೆ ಹೋಗಿ. ಮುಖಪುಟದಲ್ಲಿ “ಕ್ಲಿಕ್ ಹಿಯರ್ ಟು ರಿಜಿಸ್ಟರ್” ಮೇಲೆ ಕ್ಲಿಕ್ ಮಾಡಿ ಮತ್ತು ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡುವ ಮೂಲಕ ನೋಂದಾಯಿಸಿ.
ನಿಮ್ಮ ಪ್ರತಿಕ್ರಿಯೆ ಏನು?






