ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ: ಶಾಸಕ ಬಿಆರ್ ಪಾಟೀಲ್

ಫೆಬ್ರವರಿ 2, 2025 - 18:19
 0  13
ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ: ಶಾಸಕ ಬಿಆರ್ ಪಾಟೀಲ್

ಕಲಬುರಗಿ: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ ಎಂದು ಶಾಸಕ ಬಿಆರ್ಪಾಟೀಲ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರುಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಸ್ಥಾನಕ್ಕೆ ನಾನು ರಾಜಿನಾಮೆ ನೀಡಿದ್ದು ವಿಶೇಷ ಬೆಳವಣಿಗೆಯಲ್ಲ. ಯಾವುತ್ತೋ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದರು.

ನಾನು ಸಿಎಂ ಸಿದ್ದರಾಮಯ್ಯಗೆ 2ನೇ ಬಾರಿಗೆ ಪತ್ರ ಬರೆದಿದ್ದೇನೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೇವರೆಗೂ ನಿಮ್ಮ ಸ್ನೇಹಿತನಾಗಿ ಉಳಿಯುತ್ತೇನೆ ಅಂದಿದ್ದಾರೆ ಎಂದು ಬಿಆರ್ ಪಾಟೀಲ್ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ. ಹಾಗೆಂದು ನನಗೆ ಯಾವುದೇ ಅಸಮಾಧಾನ ಇಲ್ಲ. ಪತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎಲ್ಲವನ್ನೂ ನಾನು ತಿಳಿಸಿದ್ದೇನೆ. ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಿಲ್ಲ ಎಂದು ಅವರು ಹೇಳಿದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow