ಘೋರ ದುರಂತ: ಗೆಳತಿ ಸೈಕಲ್ ಕೊಡದಿದ್ದಕ್ಕೆ 11 ವರ್ಷದ ಬಾಲಕಿ ಆತ್ಮಹತ್ಯೆ.!

ಚಿತ್ರದುರ್ಗ: ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಕ್ಷುಲ್ಲಕ ವಿಚಾರಗಳಿಗೆ ಸಾವಿನ ನಿರ್ಧಾರವನ್ನು ಕೈಗೊಳ್ಳುತ್ತಿರುವುದು ನಿಜಕ್ಕೂ ದುರಂತ. ಅದರಂತೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ಪಕ್ಕದ ಮನೆ ಗೆಳತಿ ಸೈಕಲ್ ಕೊಟ್ಟಿಲ್ಲ ಎಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದು, ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಸ್ಪಂದನಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಕ್ಕದ ಮನೆಯ ಸ್ನೇಹಿತೆ ಜತೆ ಬಾಲಕಿ ನಿತ್ಯ ಸೈಕಲ್ ಆಡುತ್ತಿದ್ದಳು. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಿಮ್ಮ ಪ್ರತಿಕ್ರಿಯೆ ಏನು?






