ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್!

ಬೆಂಗಳೂರು: ಈ ಬಾರಿಯ ಮೂರು ವಿಧಾನಸಭಾ ಉಪಚುನಾವಣೆಗಳಲ್ಲಿ ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಈಗಾಗಲೇ ಬಿಜೆಪಿ ಎಂಎಲ್‌ಸಿಯಾಗಿದ್ದ ಸಿಪಿ ಯೋಗೇಶ್ವರ್ ವರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ಪಕ್ಷ ಸೇರಿದ್ದಾರೆ. ಇದೀಗ ಎನ್‌ಡಿಎ ಅಭ್ಯರ್ಥಿ ಯಾರಾಗಲಿದ್ದಾರೆ ಎನ್ನುವ ಪ್ರಶ್ನೆ ಎಲ್ಲರಲ್ಲೂ ಮನೆ ಮಾಡಿದೆ. ಕೊನೆಗೂ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಹೌದು ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯನ್ನು ಜೆಡಿಎಸ್ ಕಣಕ್ಕೆ ಇಳಿಸಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಯಕರ ಜೊತೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್ʼಡಿ ದೇವೇಗೌಡ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರಿಗೆ ಕುಮಾರಸ್ವಾಮಿಯನ್ನ ಹೇಗಾದ್ರು ಮುಗಿಸಬೇಕು ಅಂತ ಇದೆ.ಚನ್ನಪಟ್ಟಣದ ಕಾರ್ಯಕರ್ತರು, ಜನರು ಇದಕ್ಕೆ ಉತ್ತರ ಕೊಡಬೇಕು. ನಾನೇ ಚನ್ನಪಟ್ಟಣಕ್ಕೆ ಬಂದು ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.
ಇನ್ನೂ ಮಾಜಿ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಎನ್‌ಡಿಎ ಮುಖಂಡರ ಸಭೆಯ ಬಳಿಕ ನಿಖಿಲ್ ಕುಮಾರಸ್ವಾಮಿ ಹೆಸರು ಅಧಿಕೃತವಾಗಿ ಘೋಷಣೆಯಾಗಲಿದೆ. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಲ್ಲಿ ಹೆಸರು ಘೋಷಣೆ ಮಾಡುತ್ತೇವೆ ಎಂದು ಹೆಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






