ಚನ್ನಪಟ್ಟಣದ ಫಲಿತಾಂಶ ಮುನ್ನವೇ ಸೋಲೋಪ್ಪಿಕೊಂಡ್ರಾ CP ಯೋಗೇಶ್ವರ್! ಕೊನೇಲಿ ಸೈನಿಕ ಹಿಂಗೇಳಿದ್ಯಾಕೆ!?

ನವೆಂಬರ್ 14, 2024 - 18:18
 0  27
ಚನ್ನಪಟ್ಟಣದ ಫಲಿತಾಂಶ ಮುನ್ನವೇ ಸೋಲೋಪ್ಪಿಕೊಂಡ್ರಾ CP ಯೋಗೇಶ್ವರ್! ಕೊನೇಲಿ ಸೈನಿಕ  ಹಿಂಗೇಳಿದ್ಯಾಕೆ!?

ರಾಮನಗರ:-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮತದಾನ ಅಂತ್ಯವಾಗಿದೆ. ಇನ್ನೇನಿದ್ದರೂ ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದ್ದು, ಯಾರು ಗೆಲ್ಲುತ್ತಾರೆ? ಯಾರು ಸೋಲುತ್ತಾರೆ ಎನ್ನುವ ಚರ್ಚೆಗಳು, ಲೆಕ್ಕಾಚಾರಗಳು ಶುರುವಾಗಿವೆ. 

ಹೀಗಿರುವಾಗಲೇ ಕಾಂಗ್ರೆಸ್ ಅಭ್ಯರ್ಥಿ ನೀಡಿರುವ ಹೇಳಿಕೆ ಭಾರೀ ಚರ್ಚೆ ಹುಟ್ಟು ಹಾಕಿದೆ. ಎಸ್, ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ ಉಪಚುನಾವಣೆ ಫಲಿತಾಂಶಕ್ಕೂ ಮುನ್ನವೇ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ. ನನಗಾಗಿ ಈ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಸಚಿವರು ಕೆಲಸ ಮಾಡಿದ್ದಾರೆ. ಸಾಕಷ್ಟು ಶಾಸಕರು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿದ್ದಾರೆ. ಡಿ.ಕೆ ಸುರೇಶ್ ವಿಶೇಷವಾಗಿ ಕೆಲಸ ಮಾಡಿದ್ದಾರೆ. ನನ್ನ ರಾಜಕೀಯ ಜೀವನದ ದೊಡ್ಡ ಚುನಾವಣೆ ಇದು. ಇಷ್ಟೊಂದು ತೀವ್ರತೆ ಪಡೆಯುತ್ತೆ ಅಂದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ.

ಇದು ಕುಮಾರಸ್ವಾಮಿ ಅವರಿಂದ ತೆರವಾದ ಕ್ಷೇತ್ರ, ಕುಟುಂಬಕ್ಕೆ ಉಳಿಸಿಕೊಳ್ಳಲು ಮುಂದಾದ್ರು. ರಾಜಕೀಯ ದೈತ್ಯ ನಾಯಕ ದೇವೇಗೌಡರ ಹಠ, ಮೊಮ್ಮಗನ ಗೆಲ್ಲಿಸುವ ಶಪಥ ಮಾಡಿದ್ರು. ಕೇಂದ್ರ ಸಚಿವ ಕುಮಾರಸ್ವಾಮಿ ಪುತ್ರನನ್ನ ಗೆಲ್ಲಿಸಿಕೊಂಡು ಕ್ಷೇತ್ರ ಉಳಿಸಿಕೊಳ್ಳಲು ಹೋರಾಟ ಮಾಡಿದ್ರು. ಎರಡೂ ಕಡೆಯೂ ಸಮಬಲದ ಹೋರಾಟ ಇದೆ. ಆದರೂ ಕೆಲವು ಸ್ಟೇಟ್‌ಮೆಂಟ್‌ ಹಾಗೂ ಮಾತುಗಳು ಜನರ ಭಾವನೆಗೆ ಘಾಸಿ ಮಾಡಿದೆ ಎಂದು ಬೇಸರ ಹೊರಹಾಕಿದ್ದಾರೆ. 

ಸಚಿವ ಜಮೀರ್‌ ಹೇಳಿಕೆ ಒಂದಷ್ಟು ಲಾಭ ಆದ್ರೆ ಒಂದಷ್ಟು ನಷ್ಟ ಆಗಿದೆ. ಮುಸ್ಲಿಂ ಮತಗಳ ಕ್ರೂಢೀಕರಣ ಒಂದುಕಡೆ ಆದ್ರೆ ಇನ್ನೊಂದು ಸಮುದಾಯಕ್ಕೆ ಹೊಡೆತ ಬಿದ್ದಿದೆ. ಅದರಿಂದ ಸ್ವಲ್ಪ ಆಘಾತ ಆಗಿದೆ. ನಿರಾಶಾದಾಯಕ ವಿಷಯ ಏನಿಲ್ಲ, ಯಾರೇ ಗೆದ್ರೂ ಕೂದಲೆಳೆ ಅಂತರದಲ್ಲಿ ಗೆಲ್ತೀವಿ ಎಂದು ಸಿಪಿವೈ ತಿಳಿಸಿದ್ದಾರೆ. 

ನಾನು ಕಾನ್ಫಿಡೆನ್ಸ್ ಕಳೆದುಕೊಂಡಿಲ್ಲ. ದೈತ್ಯ ಶಕ್ತಿ, ಒಕ್ಕಲಿಗರ ಬೆಂಬಲ ಇರೋ ವಂಶದ ಕುಡಿ ನನ್ನ ವಿರುದ್ಧ ಸ್ಪರ್ಧೆ ಮಾಡಿದೆ. ಕಳೆದ ಚುನಾವಣೆ ಕಾಂಗ್ರೆಸ್ ಪಡೆದ ಮತ 15 ಸಾವಿರ. ಈಗ ನಾವು ಒಂದು ಲಕ್ಷಕ್ಕಿಂತ ಅಧಿಕ ಮತ ಪಡೆದರೆ ಗೆಲುವು ಸಿಗುತ್ತೆ. ಈವರೆಗೂ ನನ್ನ ಎಲ್ಲಾ ಚುನಾವಣೆಯಲ್ಲೂ 80 ರಿಂದ 90 ಸಾವಿರ ಮತಗಳ ಪಡೆಯುತ್ತಿದ್ದೆ. ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದೇನೆ. ಬಿಜೆಪಿ-ಜೆಡಿಎಸ್ ಎರಡರ ಮೈತ್ರಿ ಇಲ್ಲಿ ವರ್ಕ್ ಆಗಬಹುದು. ಹಾಗಾಂತ ಹತಾಶೆ ಇಲ್ಲ, ಸಮಬಲದ ಹೋರಾಟ ಅಷ್ಟೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow