ಚನ್ನಪಟ್ಟಣದಲ್ಲಿ ನನಗೆ NDA ಅಭ್ಯರ್ಥಿ ಗೆಲ್ಲಲೇಬೇಕು: ಹೆಚ್ ಡಿ ಕುಮಾರಸ್ವಾಮಿ

ಅಕ್ಟೋಬರ್ 12, 2024 - 22:29
 0  22
ಚನ್ನಪಟ್ಟಣದಲ್ಲಿ ನನಗೆ NDA ಅಭ್ಯರ್ಥಿ ಗೆಲ್ಲಲೇಬೇಕು: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಚನ್ನಪಟ್ಟಣದಲ್ಲಿ ನನಗೆ NDA ಅಭ್ಯರ್ಥಿ ಗೆಲ್ಲಲೇಬೇಕು ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಎಂದು 95% ನಾಯಕರು, ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ನಾವು ಈಗ ಇರುವ ಸನ್ನಿವೇಶ ನೋಡಬೇಕು. ಏನೇನು ಬೆಳವಣಿಗೆಗಳು ಇವೆ ಎಂದು ನೋಡಬೇಕು. ನಿಖಿಲ್ ಮಂಡ್ಯದಲ್ಲಿ ನಿಲ್ಲಿಸಿದಾಗ ಎಲ್ಲಾ ಪಕ್ಷಗಳು ಒಂದಾಗಿ ಸೋಲಿಸಿದರು.

ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲಾ ಒಂದಾಗಿದ್ದರು. ಅವೆಲ್ಲಾ ನೋಡಿದ್ದೇವೆ. ಚನ್ನಪಟ್ಟಣದಲ್ಲಿ ನನಗೆ ಎನ್ಡಿಎ ಅಭ್ಯರ್ಥಿ ಗೆಲ್ಲಲೇಬೇಕು. ನಿಖಿಲ್ ಅಥವಾ ಬೇರೆ ಅವರು ಅಭ್ಯರ್ಥಿ ಅನ್ನೋದಕ್ಕಿಂತ ಹೆಚ್ಚಾಗಿ ಎನ್ಡಿಎ ಅಭ್ಯರ್ಥಿ ಗೆಲುವು ಕಾಣಬೇಕು. ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರು, ಕಾರ್ಯಕರ್ತರು ಎಲ್ಲರು ಸೇರಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ ಮಾಡುತ್ತೇವೆ ಎಂದು ತಿಳಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow