ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್..! ಓರ್ವ ಆರೋಪಿ ಅರೆಸ್ಟ್

ಜುಲೈ 27, 2025 - 22:01
 0  14
ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್..! ಓರ್ವ ಆರೋಪಿ ಅರೆಸ್ಟ್

ಮಹಾರಾಷ್ಟ್ರ: ಲೋನಾವಾಲಾದ ತುಂಗೌಲಿ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಚಲಿಸುತ್ತಿದ್ದ ಕಾರಿನಲ್ಲೇ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಲೋನಾವಾಲಾ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಪೊಲೀಸರಿಂದ ಲಭಿಸಿದ ಪ್ರಾಥಮಿಕ ಮಾಹಿತಿಯ ಪ್ರಕಾರ, 25 ರಿಂದ 35 ವರ್ಷದ ವಯಸ್ಸಿನ ಮೂವರು ಪುರುಷರು, ರಾತ್ರಿ ಸಮಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಬಲವಂತವಾಗಿ ಕಾರಿಗೆ ಎಳೆದೊಯ್ದು, ನಂತರ ನಿರ್ಜನ ಪ್ರದೇಶಗಳಿಗೆ ಕರೆದುಕೊಂಡು ಹೋಗಿ ಸರದಿಯಲ್ಲಿ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ದಾರಿಯುದ್ದಕ್ಕೂ ಕಾರು ನಿಲ್ಲಿಸಿ, ಹಲ್ಲೆ ನಡೆಸಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಬಳಿಕ ಆಘಾತಕ್ಕೊಳಗಾದ ಮಹಿಳೆ, ಕೊನೆಗೂ ಸುರಕ್ಷಿತ ಸ್ಥಳವೊಂದಕ್ಕೆ ತಲುಪಿ, ಪ್ರಕರಣವನ್ನು ಸ್ಥಳೀಯ ಪೊಲೀಸರಿಗೆ ವರದಿ ಮಾಡಿದರು. ಅವರ ಧೈರ್ಯದಿಂದಲೇ ಪ್ರಕರಣ ಬೆಳಕಿಗೆ ಬಂದಿದೆ.ತಕ್ಷಣ ಕ್ರಮಕೈಗೊಂಡ ಲೋನಾವಾಲಾ ನಗರ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಶ್ರಮಿಸಿದ್ದಾರೆ. ಕೇವಲ 12 ಗಂಟೆಗಳೊಳಗೆ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳು ಇನ್ನೂ ಪರಾರಿಯಾಗಿದ್ದು, ಅವರನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಿ ಸಕ್ರಿಯ ಹುಡುಕಾಟ ನಡೆಯುತ್ತಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow