ಚಾಂಪಿಯನ್ಸ್ ಟ್ರೋಫಿ ಗೆದ್ದು ನಿವೃತ್ತಿ ಬಗ್ಗೆ ರೋಹಿತ್ ಶರ್ಮಾ ಹೇಳಿದ್ದೇನು ಗೊತ್ತಾ..?

2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಅದ್ಭುತ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ 5 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 251 ರನ್ ಗಳಿಸಿತು. ಭಾರತ ಸುಲಭವಾಗಿ ಗೆಲುವಿನ ಗುರಿ ತಲುಪಿತು. ರೋಹಿತ್ ನಾಯಕತ್ವದಲ್ಲಿ ಟೀಂ ಇಂಡಿಯಾ 12 ವರ್ಷಗಳ ನಂತರ ಮತ್ತೆ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತು.
ಇನ್ನೂ 2024ರ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ಬಳಿಕ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದ ರೋಹಿತ್ ಶರ್ಮಾ, ಫೈನಲ್ ಪಂದ್ಯದ ಬಳಿಕ ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ವದಂತಿ ಹಬ್ಬಿತ್ತು. ಈ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಪೋಸ್ಟ್ ಪ್ರಸೆಂಟೇಷನ್‌ನಲ್ಲಿ ಭವಿಷ್ಯದ ಯೋಜನೆಗಳೇನಾದ್ರೂ ಇದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ರೋಹಿತ್
2027ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಸುಳಿವು ಕೊಟ್ಟಿದ್ದಾರೆ. ಭವಿಷ್ಯದ ಯೋಜನೆಗಳು ಭವಿಷ್ಯದಲ್ಲಿ ಬರುತ್ತವೆ. ಸದ್ಯಕ್ಕೆ, ಎಲ್ಲವೂ ಹಾಗೆಯೇ ಮುಂದುವರಿಯುತ್ತದೆ ಎಂದು ರೋಹಿತ್ ಹೇಳಿದ್ದಾರೆ. ಸೆಮಿ ಫೈನಲ್ ವರೆಗೂ ಬ್ಯಾಟಿಂಗ್‌ನಲ್ಲಿ ಫಾರ್ಮ್ ಕಳೆದುಕೊಂಡಿದ್ದ ರೋಹಿತ್ ಶರ್ಮಾ ಫೈನಲ್‌ನಲ್ಲಿ ಕೀವೀಸ್ ಬೌಲರ್‌ಗಳನ್ನು ಚೆಂಡಾಡಿದರು. 83 ಎಸೆತಗಳಲ್ಲಿ 75 ರನ್ ಚಚ್ಚಿ ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು.
ನಿಮ್ಮ ಪ್ರತಿಕ್ರಿಯೆ ಏನು?






