ಚಾಂಪಿಯನ್ಸ್ ಟ್ರೋಫಿಗೂ ಮುನ್ನವೇ ಆಸ್ಟ್ರೇಲಿಯಾಗೆ ಶಾಕ್: ಕ್ಯಾಪ್ಟನ್ ಸೇರಿ 5 ಪ್ಲೇಯರ್ಸ್ ಔಟ್!‌

ಫೆಬ್ರವರಿ 14, 2025 - 09:17
 0  9
ಚಾಂಪಿಯನ್ಸ್ ಟ್ರೋಫಿಗೂ ಮುನ್ನವೇ ಆಸ್ಟ್ರೇಲಿಯಾಗೆ ಶಾಕ್: ಕ್ಯಾಪ್ಟನ್ ಸೇರಿ 5 ಪ್ಲೇಯರ್ಸ್ ಔಟ್!‌

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹಲವು ಆಟಗಾರರು ಹೊರಗುಳಿದಿದ್ದಾರೆ. ಹೌದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದ್ದು, ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಆಸ್ಟ್ರೇಲಿಯಾ ತಂಡದ ಐವರು ಸ್ಟಾರ್​ ಅಲಭ್ಯರಾಗಿದ್ದಾರೆ. 

ಈ ಬಾರಿಯ ಟೂರ್ನಿಗೆ ಆಯ್ಕೆ ಮಾಡಲಾಗಿದ್ದ 15 ಸದಸ್ಯರಲ್ಲಿ ಐವರು ಆಟಗಾರರು ಚಾಂಪಿಯನ್ಸ್​ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ತಂಡದಲ್ಲಿ ಐದು ಬದಲಾವಣೆ ಕಂಡು ಬಂದಿದೆ. ಹೀಗೆ ಆಸೀಸ್ ಪಡೆಯಿಂದ ಹೊರಬಿದ್ದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.

ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಪಾದದ ನೋವಿನ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಬಾರಿ ತಂಡವನ್ನು ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ.

ಜೋಶ್ ಹ್ಯಾಝಲ್​ವುಡ್​: ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಕಣಕಾಲಿನ ಹಿ೦ಭಾಗದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲು ವಿಳಂಬವಾಗಲಿದ್ದು, ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

ಮಿಚೆಲ್ ಮಾರ್ಷ್: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಮಿಚೆಲ್ ಮಾರ್ಷ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸಹ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ.

ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಸಹ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದು, ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಕ್ರಿಕೆಟ್ ಆಸ್ಟ್ರೇಲಿಯಾ ನಿರಾಕರಿಸಿದೆ.

ಮಾರ್ಕಸ್ ಸ್ಟೊಯಿನಿಸ್: ಆಸೀಸ್ ಪಡೆಯ ಆಲ್​ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಅಚ್ಚರಿ ಎಂಬಂತೆ ಕೆಲ ದಿನಗಳ ಹಿಂದೆ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಮಾರ್ಕಸ್ ಸ್ಟೊಯಿನಿಸ್ ಕಾಣಿಸಿಕೊಳ್ಳುವುದಿಲ್ಲ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow