ಚಾಂಪಿಯನ್ಸ್ ಟ್ರೋಫಿಗೆ ಜಸ್ಪ್ರೀತ್ ಬುಮ್ರಾ ಎಂಟ್ರಿ ಕೊಡ್ತಾರಾ..? ಇಲ್ಲಿದೆ ಗುಡ್ ನ್ಯೂಸ್

ಭಾರತ ಕ್ರಿಕೆಟ್ ತಂಡ 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪ್ರವೇಶಿಸಿದೆ. ಈ ನಡುವೆ ಟೀಂ ಇಂಡಿಯಾಕ್ಕೆ ಒಂದು ಗುಡ್ ನ್ಯೂಸ್ ಸಿಕ್ಕಿದೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇಂಜುರಿಯಿಂದ ಚೇತರಿಸಿಕೊಂಡು ಬೌಲಿಂಗ್ ಅಭ್ಯಾಸ ಶುರು ಮಾಡಿದ್ದಾರೆ. ಇಂಜುರಿಯಿಂದಾಗಿ ತಂಡದಿಂದ ಹೊರಬಿದ್ದು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್ನಲ್ಲಿರುವ ಬುಮ್ರಾ,
ಇದೀಗ ಫಿಟ್ ಆಗಿದ್ದು ಬೌಲಿಂಗ್ ಮಾಡಲು ಪ್ರಾರಂಭಿಸಿದ್ದಾರೆ. ಇದರ ವಿಡಿಯೋವನ್ನು ಬುಮ್ರಾ ಹಂಚಿಕೊಂಡಿದ್ದು, ಸೆಮಿಫೈನಲ್‌ಗೂ ಮುನ್ನ ಟೀಂ ಇಂಡಿಯಾವನ್ನು ಸೇರಿಕೊಳ್ಳುತ್ತಾರೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.
ಬೆನ್ನು ನೋವಿನಿಂದಾಗಿ ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದರು. ರಿಹ್ಯಾಬ್ಗಾಗಿ ಬೆಂಗಳೂರಿನ ಎನ್‌ಸಿಎ ಸೇರಿಕೊಂಡಿದ್ದ ಬುಮ್ರಾ ಪ್ರಸ್ತುತ ಬಿಸಿಸಿಐ ವೈದ್ಯಕೀಯ ಸಿಬ್ಬಂದಿಯ ಮೇಲ್ವಿಚಾರಣೆಯಲ್ಲಿದ್ದಾರೆ. ಸುಮಾರು ಒಂದು ತಿಂಗಳ ಕಾಲ ಮೈದಾನದಿಂದ ದೂರವಿದ್ದ ಬುಮ್ರಾ ಈಗ ನೆಟ್ಸ್‌ನಲ್ಲಿ ಬೌಲಿಂಗ್ ಮಾಡಲು ಪ್ರಾರಂಭಿಸಿದ್ದಾರೆ.
ವೀಡಿಯೊದಲ್ಲಿ ಅವರು ಉತ್ತಮ ಲಯದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಆದರೆ ಮಾರ್ಚ್ 4 ರಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ಗೆ ಅವರು ತಂಡವನ್ನು ಕೂಡಿಕೊಳ್ಳುವುದು ಕಷ್ಟಕರವಾಗಿದೆ. ಏಕೆಂದರೆ ಸೆಮೀಸ್ ಪಂದ್ಯ ನಡೆಯಲು ಕೇವಲ 4 ದಿನಗಳು ಮಾತ್ರ ಉಳಿದಿವೆ. ಇದರ ಜೊತೆಗೆ ಬುಮ್ರಾ ಲಭ್ಯತೆಯ ಬಗ್ಗೆ ಬಿಸಿಸಿಐನಿಂದಲೂ ಯಾವುದೇ ಮಾಹಿತಿ ಬಂದಿಲ್ಲ.
ನಿಮ್ಮ ಪ್ರತಿಕ್ರಿಯೆ ಏನು?






