ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಏಕಾಕಾಕಿ ಸ್ಫೋಟ: ಧಗಧಗಿಸಿ ಹೊತ್ತಿ ಉರಿದ EV ಬೈಕ್

ಅಕ್ಟೋಬರ್ 13, 2025 - 09:12
 0  11
ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಏಕಾಕಾಕಿ ಸ್ಫೋಟ: ಧಗಧಗಿಸಿ ಹೊತ್ತಿ ಉರಿದ EV ಬೈಕ್

ಬೆಂಗಳೂರು: ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಎಲೆಕ್ಟ್ರಿಕ್ ಬೈಕ್ ಒಂದು ಸ್ಪೋಟಗೊಂಡು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಮುಖೇಶ್ ಎಂಬುವವರಿಗೆ ಸೇರಿದ ಎಲೆಕ್ಟ್ರಿಕ್ ಬೈಕ್ ಮನೆಯ ಬೇಸ್‌ಮೆಂಟ್‌ನಲ್ಲಿ ಚಾರ್ಜ್‌ಗೆ ಹಾಕಲಾಗಿತ್ತು. ಈ ವೇಳೆ ಬೈಕ್ ಏಕಾಏಕಿ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ.

ಸ್ಫೋಟದಿಂದಾಗಿ ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಪಕ್ಕದಲ್ಲಿದ್ದ ಸೈಕಲ್ ಕೂಡ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಕಟ್ಟಡದೊಳಗೆ ಹಬ್ಬುತ್ತಿದ್ದಂತೆಯೇ ಸ್ಥಳೀಯರು ತಕ್ಷಣ ಬೈಕ್ ಅನ್ನು ಹೊರತೆಗೆದು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನೆಯ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow