ಚಿಕಿತ್ಸೆ ಪಡೆಯದೇ ನಿರ್ಲಕ್ಷ್ಯ: ನಾಯಿ ಕಚ್ಚಿ 15 ದಿನದ ಬಳಿಕ ರೇಬಿಸ್ ಗೆ ತುತ್ತಾದ ಮಹಿಳೆ!

ಮಾರ್ಚ್ 22, 2025 - 15:59
 0  15
ಚಿಕಿತ್ಸೆ ಪಡೆಯದೇ ನಿರ್ಲಕ್ಷ್ಯ: ನಾಯಿ ಕಚ್ಚಿ 15 ದಿನದ ಬಳಿಕ ರೇಬಿಸ್ ಗೆ ತುತ್ತಾದ ಮಹಿಳೆ!

ಮಂಗಳೂರು:-ನಾಯಿ ಕಚ್ಚಿ 15 ದಿನದ ಬಳಿಕ ಮಹಿಳೆಯೋರ್ವರು ರೇಬಿಸ್ ರೋಗಕ್ಕೆ ತುತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ಜರುಗಿದೆ. 

 ನಾಯಿ ಕಚ್ಚಿದ್ರೂ ಚಿಕಿತ್ಸೆ ಪಡೆಯದೇ ನಿರ್ಲಕ್ಷ್ಯ ತೋರಿದ ಹಿನ್ನೆಲೆ  ಮಂಗಳೂರಿನ ಸಂಪಾಜೆಯ ಕಲ್ಲುಗುಂಡಿ ಬಳಿ ಮಹಿಳೆ ಸಾವನ್ನಪ್ಪಿದ್ದಾರೆ. 

ಇದೇ ತಿಂಗಳ ಕಳೆದ ದಿನಾಂಕ 7 ರಂದು ಅರಂತೋಡಿಗೆ ತೋಟದ ಕೆಲಸಕ್ಕೆ ಮಹಿಳೆ ತೆರಳಿದ್ದ ವೇಳೆ ಬೀದಿಯಲ್ಲಿದ್ದ ನಾಯಿಮರಿ ಕಚ್ಚಿದೆ. ನಾಯಿ ಮರಿ ಕಚ್ಚಿದ್ದರೂ ಮಹಿಳೆ ಯಾರಿಗೆ ತಿಳಿಸದೇ, ಚಿಕಿತ್ಸೆ ಪಡೆಯದೇ ನಿರ್ಲಕ್ಷ್ಯ ವಹಿಸಿದ್ದರು.

ಮಾ.17 ಅಂದ್ರೆ ಸೋಮವಾರ ಮಹಿಳೆಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಿಳೆ ಚಿಕಿತ್ಸೆಗಾಗಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ ನೀರನ್ನು ನೋಡಿ ಕಿರುಚಾಡಲು ಆರಂಭಿಸಿದ್ದಾರೆ.  

ವಿಚಿತ್ರ ವರ್ತನೆ ತೋರುತ್ತಿದ್ದ ಹಿನ್ನೆಲೆಯಲ್ಲಿ ಮಹಿಳೆ ಬಳಿ ಮತ್ತಷ್ಟು ಪ್ರಶ್ನೆ ಕೇಳಿದಾಗ ನಾಯಿ ಕಚ್ಚಿದ್ದನ್ನು ತಿಳಿಸಿದ್ದಾರೆ. ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ  ದಾಖಲಾಗುವಂತೆ ಸೂಚಿಸಿದ್ದಾರೆ. ಸುಳ್ಯ ವೈದ್ಯರ ಶಿಫಾರಸಿನಂತೆ ಮಹಿಳೆಯನ್ನು ವೆನ್ಲಾಕ್‌ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಹಿಳೆ ಮೃತಪಟ್ಟಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow