ಚಿತ್ತಾಪುರ RSS ಪಥಸಂಚಲನ ಮತ್ತೆ ಮುಂದೂಡಿಕೆ: ಶಾಂತಿ ಸಭೆ ಬಗ್ಗೆ ಹೈಕೋರ್ಟ್ ಮಹತ್ವದ ಸೂಚನೆ

ಅಕ್ಟೋಬರ್ 30, 2025 - 16:00
 0  15
ಚಿತ್ತಾಪುರ RSS ಪಥಸಂಚಲನ ಮತ್ತೆ ಮುಂದೂಡಿಕೆ: ಶಾಂತಿ ಸಭೆ ಬಗ್ಗೆ ಹೈಕೋರ್ಟ್ ಮಹತ್ವದ ಸೂಚನೆ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರವಾದ ಕಲಬುರಗಿಯ ಚಿತ್ತಾಪುರದಲ್ಲಿ ಪಥಸಂಚಲನ ಸಂಘರ್ಷ ನಡೆಯುತ್ತಿದೆ. ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್​ಎಸ್​​ಎಸ್​ ಕೊರ್ಟ್​​ ಮುಂದೆ ತಿಳಿಸಿದ್ದು, ಈ ಸಂಬಂಧ ಶಾಂತಿ ಸಭೆ ನಡೆಸುವಂತೆ ಕೋರ್ಟ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಕಲಬುರಗಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾರೀ ಹೈಡ್ರಾಮಾವೇ ನಡೆದಿತ್ತು.

ಇದೀಗ ಶಾಂತಿ ಸಭೆ ಅಶಾಂತಿಯಲ್ಲಿ ಅಂತ್ಯಗೊಂಡಿದ್ದರಿಂದ ಕೋರ್ಟ್ ಅಸಮಾಧಾನಗೊಂಡಿದೆ. ಜಿಲ್ಲಾಡಳಿ ಯಾವುದೇ ಸೂಕ್ತ ನಿರ್ಧಾರ ಕೈಗೊಳ್ಳದಿರುವುದರಿಂದ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಮತ್ತೊಂದು ಶಾಂತಿ ಸಭೆಗೆ ಸೂಚಿಸಿದೆ. 

ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿಯೇ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚಿಸಿ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ. ಹೀಗಾಗಿ ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್​​ಎಸ್​ಎಸ್​ಗೆ ಹಿನ್ನಡೆಯಾದಂತಾಗಿದೆ.

ನವೆಂಬರ್ 5ರಂದು ಅರ್ಜಿದಾರರು, ಅವರ ವಕೀಲರೊಂದಿಗೆ ಶಾಂತಿ ಸಭೆ ನಡೆಸಲು ಸೂಚಿಸಲಾಗಿದ್ದು, ಇಂತಹ ಘಟನೆಯಾದಾಗ ಪರಿಹಾರ ಹೇಗಿರಬೇಕೆಂಬುದಕ್ಕೆ ಇದು ಮಾರ್ಗಸೂಚಿಯಾಗಬೇಕು ಎಂದು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್​ ಅವರು ಸರ್ಕಾರ, ಅರ್ಜಿದಾರರಿಗೆ ತಿಳಿಸಿದ್ದಾರೆ.

ಎರಡೂ ಕಡೆಯಿಂದ ವಾದ ಪ್ರತಿವಾದ ಆಲಿಸಿದ ಕೋರ್ಟ್, ಅಂತಿಮವಾಗಿ ನವೆಂಬರ್ 5ರಂದು ಮತ್ತೊಂದು ಶಾಂತಿ ನಡೆಸಲು ಸೂಚಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ. ಇದರೊಂದಿಗೆ ಇದೇ ನವೆಂಬರ್ 2ರ  ಚಿತ್ತಾಪುರದಲ್ಲಿ ಆರ್​ಎಸ್​ಎಸ್​ ಪಥಸಂಚಲನಕ್ಕೆ ಬ್ರೇಕ್ ಬಿದ್ದಿದ್ದು, ನವೆಂಬರ್ 5ರ ಶಾಂತಿ ಸಭೆ ಆಧರಿಸಿ ಕೋರ್ಟ್​ ತನ್ನ ತೀರ್ಪು ನೀಡಲಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow