ಚಿನ್ನ ಕಳ್ಳಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್’ಗೆ ಸಂಕಷ್ಟ - ತನಿಖೆಗೆ ಗೃಹ ಇಲಾಖೆ ಆದೇಶ

ಮಾರ್ಚ್ 11, 2025 - 14:00
ಮಾರ್ಚ್ 11, 2025 - 14:01
 0  18
ಚಿನ್ನ ಕಳ್ಳಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್’ಗೆ ಸಂಕಷ್ಟ - ತನಿಖೆಗೆ ಗೃಹ ಇಲಾಖೆ ಆದೇಶ

ಬೆಂಗಳೂರುರನ್ಯಾ ರಾವ್ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಪ್ರಕರಣದಲ್ಲಿ ಸಚಿವರ ಭಾಗಿತ್ವ ಇದೆ ಅಂತ ಬಿಜೆಪಿ ಆರೋಪಿಸಿದೆ. ಇದರ ಬೆನ್ನಲ್ಲೇ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್​​ ಅವರಿಗೆ ಶಿಷ್ಟಾಚಾರ ಸೌಲಭ್ಯ ನೀಡಿರುವ ಸಂಬಂಧ ತನಿಖೆ ನಡೆಸಲು ಹಿರಿಯ IAS ಅಧಿಕಾರಿ ಗೌರವ ಗುಪ್ತಾ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯಗಳು ದುರ್ಬಳಕೆಯಾಗಿರುವ ಬಗ್ಗೆ ತನಿಖೆ ನಡೆಸುವಂತೆ ತಿಳಿಸಲಾಗಿದೆ.

ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸಲು ಸೂಚಿಸಲಾಗಿದೆ.

ನಟಿ ರನ್ಯಾ ಚಿನ್ನ ನಸಾಗಾಟ ಮಾಡುವಾಗ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಹೆಸರು ಬಳಸಿದ್ದರು. ಹೀಗಾಗಿ ಶಿಷ್ಟಾಚಾರದ ಸೌಲಭ್ಯ ಪಡೆಯಲು ಕಾರಣವಾದ ಸಂಗತಿಗಳು ಯಾವುವು? ಕೇಸ್​​ನಲ್ಲಿ ರಾಮಚಂದ್ರರಾವ್ ಪಾತ್ರ ಏನೇನಿದೆ ಎಂಬ ಬಗ್ಗೆ ತನಿಖೆ ನಡೆಸಲು ಅಧಿಕಾರಿ ನೇಮಿಸಲಾಗಿದೆ. ಇವರು ತಕ್ಷಣ ತನಿಖೆ ಪ್ರಾರಂಭಿಸಿ ಒಂದು ವಾರದಲ್ಲಿ ವರದಿ ಸಲ್ಲಿಸಬೇಕಿದೆ.

ಪ್ರಕರಣ ಸಂಬಂಧ ಉದ್ಯಮಿ ಪುತ್ರ ತರುಣ್ ರಾಜು ಎಂಬವರನ್ನು ಡಿಆರ್​​ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ತನಿಖೆ ಚುರುಕುಗೊಂಡಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow