ಚಿನ್ನ ಕೊಳ್ಳುವವರಿಗೆ ಸಿಹಿ ಸುದ್ದಿ! ಚಿನ್ನ-ಬೆಳ್ಳಿ ಬೆಲೆ ಭರ್ಜರಿ ಇಳಿಕೆ - ತಡಮಾಡದೆ ಇಂದೇ ಖರೀದಿಸಿ
ಚಿನ್ನ ಯಾರಿಗಿಷ್ಟ ಇಲ್ಲ ಹೇಳಿ.. ಪ್ರತಿಯೊಬ್ಬರೂ ಅಲ್ಲದಿದ್ದರೂ ಭಾರತದಂತಹ ದೇಶದಲ್ಲಿ ಬಹುತೇಕರು ಮೈತುಂಬಾ ಚಿನ್ನ ಧರಿಸಿ ಓಡಾಡಬೇಕು ಎಂದು ಇಷ್ಟಪಡುತ್ತಾರೆ. ಇಂದಿನ ಕಾಲದಲ್ಲಿ ಚಿನ್ನ ಬರೀ ಆಭರಣವಾಗಿರದೇ, ಅದೊಂದು ಪರೋಕ್ಷವಾಗಿ ಇನ್ವೆಸ್ಟ್‌ಮೆಂಟೂ ಹೌದು.. ಹೀಗಾಗಿ ಕರ್ನಾಟಕ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನದ ದರ ಇಲ್ಲಿ ಕೊಡಲಾಗಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ ಇಳಿಕೆ ಕಂಡಿವೆ. ಆಭರಣ ಚಿನ್ನದ ಬೆಲೆ ಗ್ರಾಮ್ಗೆ 60 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 2 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 10,880 ರೂನಿಂದ 10,820 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 11,804 ರೂಗೆ ತಗ್ಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,08,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,18,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,08,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 15,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,100 ರೂ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,804 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,820 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 3ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,804 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,820 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 8,853 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ
ನಿಮ್ಮ ಪ್ರತಿಕ್ರಿಯೆ ಏನು?