ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ವಿರುದ್ಧ ಸೋತ ಬೆನ್ನಲ್ಲೇ RCBಗೆ ಬಿಗ್ ಶಾಕ್!

ಎಪ್ರಿಲ್ 13, 2025 - 09:09
 0  27
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ವಿರುದ್ಧ ಸೋತ ಬೆನ್ನಲ್ಲೇ RCBಗೆ ಬಿಗ್ ಶಾಕ್!

ತವರು ಮೈದಾನ ಚಿನ್ನಸ್ವಾಮಿ ಮೈದಾನದಲ್ಲಿ ಸತತ ಎರಡು ಪಂದ್ಯ ಸೋಲುವ ಮೂಲಕ ಆಘಾತದಲ್ಲಿರುವ ಆರ್​ಸಿಬಿಗೆ ಮತ್ತೊಂದು ಶಾಕ್ ಆಗಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಆರ್​ಸಿಬಿ, ದಿಢೀರ್ ಅಂತಾ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

ಚೆನ್ನೈನಲ್ಲಿ ನಿನ್ನೆ ಸಿಎಸ್​ಕೆ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಮುಖಾಮುಖಿ ಆಗಿದ್ದವು. ಕೋಲ್ಕತ್ತ ನೈಟ್​ ರೈಡರ್ಸ್​ ಚೆನ್ನೈ ತಂಡವನ್ನು 9 ವಿಕೆಟ್​ಗಳಿಂದ ಮಣಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಬಂದಿದೆ.

ಇಲ್ಲಿಯವರೆಗೆ ಆರು ಪಂದ್ಯಗಳನ್ನು ಆಡಿರುವ ಕೆಕೆಆರ್, ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ 6 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿದೆ. ಇನ್ನು ಐದು ಪಂದ್ಯಗಳಲ್ಲಿ ಎರಡರಲ್ಲಿ ಸೋತಿರುವ ಆರ್​ಸಿಬಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಇನ್ನು ಗುಜರಾತ್ ಟೈಟನ್ಸ್ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು ಮೊದಲ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನದಲ್ಲಿದೆ. 

 ಇನ್ನೂ ಡೆಲ್ಲಿ ವಿರುದ್ಧ ಸೋಲನ್ನು ಕಂಡಿರುವ ಆರ್​ಸಿಬಿ ಮತ್ತೊಂದು ಪಂದ್ಯಕ್ಕೆ ಸಿದ್ಧತೆ ನಡೆಸುತ್ತಿದೆ. ರಾಜಸ್ಥಾನ್ ರಾಯಲ್ಸ್​ ವಿರುದ್ಧ ಜೈಪುರದ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆರ್​ಸಿಬಿ ತನ್ನ ಆರನೇ ಪಂದ್ಯವನ್ನು ಆಡಲಿದೆ.

ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಮತ್ತೆ ಗೆಲುವಿನ ಹಳಿಗೆ ಮರಳಲು ಆರ್​​ಸಿಬಿ ತಯಾರಿಯಲ್ಲಿ. ಅಂದ್ಹಾಗೆ ರಾಜಸ್ಥಾನ್ ರಾಯಲ್ಸ್ ಹಾಗೂ ಆರ್​ಸಿಬಿ ಈ ಬಾರಿಯ ಸೀಸನ್​​ನಲ್ಲಿ ಮೊದಲ ಬಾರಿಗೆ ಸೆಣಸಾಟ ನಡೆಸುತ್ತಿವೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow