ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ 6 ಜನರು ಬಲಿ..! ಹಲವರು ಗಂಭೀರ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸೇರಿದ್ದರಿಂದ ಗೇಟ್-6 ರಲ್ಲಿ ಕಾಲ್ತುಳಿತ ಉಂಟಾಗಿ 6 ಆರ್ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ.
ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, 17ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಸ್ಟೇಡಿಯಂ ಒಳಗೆ ಪ್ರವೇಶ ಮಾಡಲು ಆರ್ಸಿಬಿ ಅಭಿಮಾನಿಗಳ ಮಧ್ಯೆ ನೂಕು ನುಗ್ಗಲು ಏರ್ಪಟ್ಟಿದೆ.
ಕಾಲ್ತುಳಿತದಲ್ಲಿ ಸಿಲುಕಿ ಹಲವು ಯುವಕ, ಯುವತಿಯರು ಅಸ್ವಸ್ಥರಾಗಿದ್ದಾರೆ. ನೂಕುನುಗ್ಗಲಿನಲ್ಲಿ ಸಿಲುಕಿದ್ದ ಆರ್ಸಿಬಿ ಅಭಿಮಾನಿಗಳನ್ನ ರಕ್ಷಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸುಮಾರು 17ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






