ಚಿನ್ನಾಭರಣ ವಂಚನೆ ಪ್ರಕರಣ: ಐಶ್ವರ್ಯ ಗೌಡಗೆ ಬಿಗ್ ರಿಲೀಫ್ ಕೊಟ್ಟ ಕೋರ್ಟ್ - ಷರತ್ತು ಬದ್ಧ ಜಾಮೀನು ಮಂಜೂರು!

ಬೆಂಗಳೂರು: ಚಿನ್ನ ಸೇರಿದಂತೆ ಹಲವು ವಂಚನೆ ಪ್ರಕರಣಗಳನ್ನು ಎದುರಿಸುತ್ತಿರುವ ಐಶ್ವರ್ಯ ಗೌಡಗೆ ಇದೀಗ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡುವ ಮೂಲಕ ಬಿಗ್ ರಿಲೀಫ್ ನೀಡಿದೆ.
ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಐಶ್ವರ್ಯಗೌಡಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ. 5 ಲಕ್ಷ ಬಾಂಡ್, ಇಬ್ಬರ ಶೂರಿಟಿ ನೀಡಬೇಕು. ವಿಳಾಸ ಬದಲಾವಣೆ ಮಾಡಬಾರದು. ಬೆಂಗಳೂರು ಬಿಟ್ಟು ಹೋಗಬಾರದು ಎಂದು ಕೋರ್ಟ್ ಷರತ್ತು ವಿಧಿಸಿದೆ.
ಐಶ್ವರ್ಯ ಗೌಡ ಪರ ವಾದ ಮಂಡಿಸಿದ ಎಸ್. ಸುನೀಲ್ ಕುಮಾರ್, ಅನುಸೂಚಿತ ಪ್ರಕರಣವಿಲ್ಲದಿದ್ದರೂ ಇಡಿ ಬಂಧಿಸಿದೆ. ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ ಎಂದು ಹೇಳಿದರು. ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಐಶ್ವರ್ಯಗೌಡ ಮೇಲಿದೆ.
ಇಂದು ವಂಚನೆ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಕೊಟ್ಟಿದೆ. ಐಶ್ವರ್ಯಗೌಡ ಕೇಸ್ನಲ್ಲಿ ಈಗಾಗಲೇ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಡಿ.ಕೆ.ಸುರೇಶ್ಗೆ ಇ.ಡಿ ಶಾಕ್ ಕೊಟ್ಟಿದೆ.
ನಿಮ್ಮ ಪ್ರತಿಕ್ರಿಯೆ ಏನು?






